Sunday, October 6, 2024

48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನ: ರಾಜ್ಯಾದ್ಯಂತ ಜೋರು ಮಳೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದ್ದು ಜೂನ್​ 2ರಿಂದ ರಾಜ್ಯದೆಲ್ಲೆಡೆ ಮಳೆ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಇದನ್ನೂ ಓದಿ: ನಾಳೆ ಭವಾನಿ ರೇವಣ್ಣ ವಿಚಾರಣೆ: ಮನೆಯಿಂದಲೇ ವಿಚಾರಣೆ ನಡೆಸುವಂತೆ ಭವಾನಿ ಮನವಿ

ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆ ಶುರುವಾಗಲಿದೆ. ಮಂಗಳೂರು, ಧರ್ಮಸ್ಥಳ, ಪಣಂಬೂರು, ಮಾಣಿ, ಪುತ್ತೂರು, ಉಡುಪಿ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED ARTICLES

Related Articles

TRENDING ARTICLES