Sunday, September 29, 2024

ಜೂ.2ರ ಬಳಿಕ ಪ್ರಜ್ವಲ್ ವಿರುದ್ದ ಮುಂದಿನ ಕ್ರಮ

ದೆಹಲಿ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಹೊತ್ತಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮುಂದಿನ ಕ್ರಮವನ್ನು ಜೂ.2ರ ಬಳಿಕ ಕೈಗೊಳ್ಳುವುದಾಗಿ ವಿದೇಶಾಂಗ ಸಚಿವಾಲಯ ಹೇಳಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್, ‘ಪಾಸ್ಪೋರ್ಟ್ ರದ್ದತಿ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿ ಆಧರಿಸಿ, ನಿಮ್ಮ ರಾಜತಾಂತ್ರಿಕ ಪಾಸ್ಪೋರ್ಟ್ ಏಕೆ ರದ್ದು ಮಾಡಬಾರದು ಎಂದು ಪ್ರಶ್ನಿಸಿ ಮೇ 23ರಂದು ಶೋಕಾಸ್ ನೋಟಿಸ್ ನೀಡಲಾಗಿದೆ. ಅದಕ್ಕೆ ಸ್ಪಷ್ಟಿಕರಣ ನೀಡಲು ಪ್ರಜ್ವಲ್ ರೇವಣ್ಣಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ. ಅಷ್ಟರೊಳಗೆ ಅವರು ಸಮಂಜಸವಾಗಿ ಉತ್ತರಿಸದಿದ್ದಲ್ಲಿ ಮುಂದಿನ ಪ್ರಕ್ರಿಯೆಯನ್ನು ಜೂ.2ರ ಬಳಿಕ ಮುಂದುವರೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಾವು ಕಾನೂನು ಹೋರಾಟ ಮುಂದುವರೆಸುತ್ತೇವೆ: ಪ್ರಜ್ವಲ್​ ಪರ ವಕೀಲ ಅರುಣ್​

ರಾಸಲೀಲೆ ವಿಡಿಯೋಗಳ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಪ್ರಜ್ವಲ್​ ರೇವಣ್ಣ ಪ್ರಕರಣ ವಿದೇಶಕ್ಕೆ ಪರಾರಿಯಾಗಿದ್ದ ಬಳಿಕ ಪ್ರಕರಣದ ತನಿಖೆಗೆ ಯಾವುದೇ ಸಹಕಾರ ನೀಡದ ಕಾರಣ ಸಂಸದ ಪ್ರಜ್ವಲ್​ ರೇವಣ್ಣ ಪಾಸ್​ ಪೋರ್ಟ್​ ರದ್ದುಗೊಳಿಸುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಬಾರಿ ಪತ್ರ ಬರೆದಿದ್ದರು. ಆದರೇ, ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.

ವಿದೇಶದಿಂದ ಭಾರತಕ್ಕೆ ಆಗಮಿಸಿದ ಪ್ರಜ್ವಲ್​:

ಅಶ್ಲೀಲ ರಾಸಲೀಲೆ ವೀಡಿಯೋಗಳ ಪೆನ್​ಡ್ರೈವ್​ ಪ್ರಕರಣದ ರೂವಾರಿ ಸಂಸದ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಹಾರಿ 34 ದಿನಗಳ ಬಳಿಕ ಮತ್ತೆ ಸ್ವದೇಶಕ್ಕೆ ವಾಪಾಸ್ಸಾಗಿದ್ದಾರೆ. ಮೇ30 ರ ಮಧ್ಯರಾತ್ರಿ ಜರ್ಮಿನಿಯ ಮ್ಯೂನಿಕ್​ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್​ನನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.

 

RELATED ARTICLES

Related Articles

TRENDING ARTICLES