Monday, July 8, 2024

ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಜ್ವಲ್​: ವಶಕ್ಕೆ ಪಡೆದ SIT ತಂಡ

ಬೆಂಗಳೂರು: ರಾಸಲೀಲೆಗಳ ಪೆನ್​​ಡ್ರೈವ್​ ಪ್ರಕರಣದ ಪ್ರಮುಖ ರೂವಾರಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು 35 ದಿನಗಳ ಬಳಿಕ ಕೊನೆಗೂ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಏಪ್ರಿಲ್ 27ರಂದು ಜರ್ಮನಿಗೆ ಹಾರಿದ್ದ ಪ್ರಜ್ವಲ್ ಜರ್ಮನಿಯ ಮ್ಯೂನಿಕ್‌ನಿಂದ ಬಂದ ಲುಫ್ತಾನ್ಸಾ ಏರ್‌ಲೈನ್ಸ್‌ನ DLH 764 A-359 ವಿಮಾನದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದ್ದಾರೆ.
ಗುರುವಾರ (ಮೇ 30) ಭಾರತೀಯ ಕಾಲಮಾನ ಸಂಜೆ 4:09ಕ್ಕೆ ಟೇಕಾಪ್ ಆಗಿದ್ದ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನವು 8 ಗಂಟೆ ಪ್ರಯಾಣದ ಬಳಿಕ ಮಧ್ಯರಾತ್ರಿ 12:35ರ ವೇಳೆಗೆ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಯಿತು. ವಿಮಾನ ಲ್ಯಾಂಡಿಂಗ್‌ ಆಗುತ್ತಿದ್ದಂತೆ ಸಿಐಎಸ್‌ಎಫ್‌ ಸಿಬ್ಬಂದಿ ವಿಮಾನವನ್ನು ಸುತ್ತುವರಿದಿದ್ದರು. ಬಳಿಕ ಪ್ರಜ್ವಲ್‌ ಇಳಿಯುತ್ತಿದ್ದಂತೆ ವಿಮಾನ ದ್ವಾರದಲ್ಲೇ ಅವರನ್ನು ವಶಕ್ಕೆ ಪಡೆಯಲು ಮುಂದಾದರು.

RELATED ARTICLES

Related Articles

TRENDING ARTICLES