Friday, September 20, 2024

HSRP ಅಳವಡಿಕೆಗೆ ಜೂನ್​12 ಕೊನೆ: ಅಂತಿಮ ಗಡುವು ಮೀರಿದರೆ ವಾಹನ ಸೀಜ್​

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿಯೊಂದು ಹೊರಬಂದಿದ್ದು HSRP ನಂಬರ್​ ಪ್ಲೇಟ್​ ಅಳವಡಿಕೆಗೆ ಗಡುವು ವಿಸ್ತರಿಸಲಾಗಿದೆ. ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಈಗಾಗಲೇ HSRP ನಂಬರ್​ ಪ್ಲೇಟ್​ ಬದಲಾವಣೆಗೆ ಎರಡ್ಮೂರು ಬಾರಿ ಗಡುವು ವಿಸ್ತರಣೆ ಮಾಡಿದರೂ ಸಹ ನಂಬರ್ ಪ್ಲೇಟ್ ಅಳವಡಿಕೆ ಕಡಿಮೆ ಪ್ರಮಾಣದಲ್ಲಿ ಆಗಿದೆ ಹೀಗಾಗಿ ಮತ್ತೆ ಗಡುವು ವಿಸ್ತರಣೆ ಮಾಡುವ ಮೂಲಕ ಅಂತಿಮ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಕಾಂಗ್ರೆಸ್​ ಮೊದಲ ವಿಕೆಟ್​ ಪತನ: ಸಚಿವ ಬಿ.ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ರಾಜ್ಯದ 2 ಕೋಟಿ ವಾಹನಗಳ ಪೈಕಿ ಇಲ್ಲಿಯವರೆಗೆ ಕೇವಲ 41 ಲಕ್ಷ ವಾಹನಗಳು ಮಾತ್ರ HSRP ನಂಬರ್ ಪ್ಲೇಟ್ ಗಳನ್ನು ಅಳವಡಿಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಹೈಕೋರ್ಟ್ ಜೂನ್ 12 ರವರೆಗೆ HSRP ಅಳವಡಿಸದ ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ 12 ರವರೆಗೆ ಅವಕಾಶ ನೀಡಬೇಕೆಂದು ಸೂಚನೆ ನೀಡಿದೆ.

ಹೈಕೋರ್ಟ್ ಕೊಟ್ಟ ಗಡುವು ಮುಗಿದ ನಂತರವೂ ಅಳವಡಿಸಿಕೊಂಡಿಲ್ಲ ಎಂದರೆ ಮೊದಲ ಬಾರಿ 500 ರುಪಾಯಿ ಎರಡನೇ ಬಾರಿ 1 ಸಾವಿರ ಮೂರನೇ ಬಾರಿ ಗಾಡಿ ಸೀಜ್ ಮಾಡ್ತಿವಿ ಎಂದು ರಾಜ್ಯ ಸಾರಿಗೆ ಇಲಾಖೆ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ್ ಎಚ್ಚರಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES