ಬೆಂಗಳೂರು ಗ್ರಾಮಾಂತರ: ಹಾಸನ ಬಳಿ ರಸ್ತೆ ಅಪಘಾತದಲ್ಲಿ ಮೃತ ಪಟ್ಟ ದೇವನಹಳ್ಳಿ ತಾಲ್ಲೂಕಿನ ಕಾರಹಳ್ಳಿ ಮತ್ತು ಹಂದರಹಳ್ಳಿ ಗ್ರಾಮಗಳ ನಿವಾಸಿಗಳ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ಸಾಂತ್ವನ ಹೇಳಿದರು.
ಈ ವೇಳೆ ಮಾತನಾಡಿದ ಅವರು, ನಾನು ದೆಹಲಿ ಪ್ರವಾಸದಲ್ಲಿ ಇದ್ದ ಕಾರಣ ಮೃತರ ಅಂತ್ಯ ಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದರು. ನಂತರ ಮೃತರ ಮಕ್ಕಳಿಗೆ ತಲಾ 50 ಸಾವಿರ ರೂ. ಗಳ ಪರಿಹಾರವನ್ನು ವಿತರಿಸಿದರು.
ಇದನ್ನೂ ಓದಿ: ಭವಾನಿ ರೇವಣ್ಣ ಕಾರು ಚಾಲಕ ಅಜಿತ್ ಅರೆಸ್ಟ್: ಬಂಧನ ಭೀತಿಯಲ್ಲಿ ಭವಾನಿ
ಮೃತರ ಮಕ್ಕಳ ವಿಧ್ಯಾಭ್ಯಾಸಕ್ಕೆ ಬೇಕಾದ ಎಲ್ಲಾ ಸಹಕಾರ ಕೊಡಿಸುವುದರ ಜೊತೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣಕಾಸು ನೆರವನ್ನು ಚುನಾವಣೆ ನೀತಿ ಸಂಹಿತೆ ಮುಗಿದ ನಂತರ ಕೊಡಿಸುವ ಬರವಸೆಯನ್ನು ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.