Friday, July 5, 2024

ವಾಲ್ಮೀಕಿ ನಿಗಮ‌ ಹಗರಣ: SIT ರಚಿಸಿ ಸರ್ಕಾರ ಆದೇಶ

ಬೆಂಗಳೂರು: ವಾಲ್ಮೀಕಿ ನಿಗಮ‌ ಹಗರಣಕ್ಕೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಲು ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಅನುದಾನದ ಹಣ ದುರುಪಯೋಗಿದೆ ಎಂದು ಆರೋಪಿಸಿ ಅಧೀಕ್ಷಕ ಚಂದ್ರಶೇಖರನ್‌ ಡೆತ್‌ನೋಟ್‌ ಬರೆದು ಮೇ 26 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಮೃತರ ಪತ್ನಿಯು ನೀಡಿದ ದೂರಿನ ಮೇರೆಗೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಜತೆಗೆ ಬೆಂಗಳೂರು ನಗರದ ಹೈಗೌಂಡ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

ವಾಲ್ಮೀಕಿ ನಿಗಮದ ಅವ್ಯವಹಾರ: ಸಿಬಿಐ ತನಿಖೆ ಖಚಿತ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಲವು ಖಾಸಗಿ ಕಂಪನಿಗಳು ಮತ್ತು ವ್ಯಕ್ತಿಗಳ ಖಾತೆಗಳಿಗೆ ಅಕ್ರಮವಾಗಿ 89.62 ಕೋಟಿ ವರ್ಗಾವಣೆ ಮಾಡಿರುವ ಹಗರಣದ ತನಿಖೆ ಸಿಬಿಐಗೆ ವರ್ಗಾವಣೆಯಾಗುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​ ಮೊದಲ ವಿಕೆಟ್​ ಪತನ: ಸಚಿವ ಬಿ.ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ನಿಗಮದ ಅಧಿಕಾರಿಗಳು ನೀಡಿರುವ ದೂರನ್ನು ಆಧರಿಸಿ ಯೂನಿಯನ್‌ ಬ್ಯಾಂಕ್‌ ಆಫ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಇತರ ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಹೈಗ್ರೆಂಡ್ಸ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಸಚಿವ ನಾಗೇಂದ್ರ ಇಂದು ರಾಜೀನಾಮೆ?

ವಾಲ್ಮೀಕಿ ನಿಗಮದ ಅವ್ಯವಹಾರ ದಿನದಿಂದ ದಿನಕ್ಕೆ ರಾಜ್ಯ ಸರ್ಕಾರಕ್ಕೆ ಕಂಟಕವಾಗಿ ಬದಲಾಗುತ್ತಿದ್ದು, ಸಚಿವ ಬಿ.ನಾಗೇಂದ್ರ ರಾಜೀನಾಮೆ ಕುರಿತು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ವಿಸ್ತ್ರತವಾಗಿ ಚರ್ಚೆ ನಡೆಸಲಾಯಿತು.

ಈ ವೇಳೆ ಲೋಕಸಭೆ ಅಂತಿಮ ಹಂತದ ಚುನಾವಣೆ ಮುಗಿಯುವವರೆಗೂ ಕಾದು ನೋಡುವ ತಂತ್ರ ಅನುಸರಿಸಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಜೂ.2ರ ಬಳಿಕ ಮುಖ್ಯಮಂತ್ರಿಗಳು ಅಂತಿಮ ನಿರ್ಧಾರ ಮಾಡುವುದಾಗಿ ತಿಳಿದು ಬಂದಿದೆ. ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನಕ್ಕೂ ಮುನ್ನ ಅಂದರೆ ನಿನ್ನೆ ರಾಜೀನಾಮೆ ಪಡೆದರೇ ಮತದಾನದ ದಿನವಾದ ಇಂದು ದೊಡ್ಡ ಸದ್ದು ಮಾಡುವ ಸಾಧ್ಯತೆಯಿರುತ್ತದೆ. ಹೀಗಾಗಿ ಇಂದು ಸಂಜೆಯ ನಂತರ ಈ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES