Friday, September 20, 2024

ಎಂ.ಎಸ್​ ಧೋನಿ ಬಳಿಕ ಭಾರತೀಯ ಸೇನೆಯ ಅಧಿಕಾರಿಯಾಗಿ ಭವ್ಯ ನರಸಿಂಹಮೂರ್ತಿ ಆಯ್ಕೆ

ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್​ ಮಹೇಂದ್ರ ಸಿಂಗ್​ ಧೋನಿ ಬಳಿಕ ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿಯವರು ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್ ಆಗಿ ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ, ಪಾಕಿಸ್ಥಾನ ಗಡಿಯ ಬಳಿಯಿರುವ ಭಾರತೀಯ ಸೇನಾ ಘಟಕದಲ್ಲಿ ತರಬೇತಿ ಪಡೆದು ಲೆಫ್ಟಿನೆಂಟ್ ಆಗಿ ನಿಯೋಜನೆಗೊಂಡಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ದಕ್ಷಿಣ ಭಾರತದಿಂದ ಆಯ್ಕೆಯಾಗಿರುವ ಮೊದಲ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿ ಹಾಗೂ 2022 ಸಾಲಿನ ಪರೀಕ್ಷೆಯಲ್ಲಿ ಆಯ್ಕೆಯಾದ ಏಕೈಕ ಮಹಿಳಾ ಪ್ರಾದೇಶಿಕ ಸೇನಾ ಅಧಿಕಾರಿಯಾಗಿದ್ದೇನೆ. ಇನ್ನು ಮುಂದೆ ನಾನು ದೇಶದ ಒಳಗೆ ರಾಜಕಾರಣಿಯಾಗಿ ನನ್ನ ಜನರ ಸೇವೆ ಮಾಡುವುದರ ಜೊತೆಗೆ ಭಾರತೀಯ ಸೇನಾಧಿಕಾರಿಯಾಗಿ ನನ್ನ ದೇಶ ಕರೆದಾಗ ಗಡಿಯಲ್ಲಿ ದೇಶದ ರಕ್ಷಣೆ ಮಾಡಲೂ ಸಿದ್ಧಳಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ: ಎಕ್ಸಿಟ್​​ ಪೋಲ್​​ನಲ್ಲಿ NDAಗೆ ಬಹುಪರಾಕ್​ ಬೆನ್ನಲ್ಲೇ ಪ್ರಧಾನಿಯಿಂದ ಸರಣಿ ಸಭೆ ಇಂದು

ಪ್ರಸ್ತುತ ಪ್ರಾದೇಶಿಕ ಸೇನೆಯಲ್ಲಿರುವ ಕೆಲವು ಪ್ರಮುಖ ವ್ಯಕ್ತಿಗಳಲ್ಲಿ ಕ್ರಿಕೆಟ್ ಆಟಗಾರ ಎಂ.ಎಸ್ ಧೋನಿ, ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಮಂತ್ರಿ ಸಚಿನ್ ಪೈಲಟ್, ಮಾಜಿ ಕೇಂದ್ರ ಸಚಿವ ಅನುರಾಗ ಠಾಕುರ್ ಸಾಲಿಗೆ ಭವ್ಯ ನರಸಿಂಹಮೂರ್ತಿಯವರು ಸೇರಿದ್ದಾರೆ.

RELATED ARTICLES

Related Articles

TRENDING ARTICLES