Sunday, October 6, 2024

ಬೆಂಗಳೂರಿನ 3 ಮತ ಎಣಿಕೆ ಕೇಂದ್ರಗಳಲ್ಲಿ ಸಕಲ ಸಿದ್ಧತೆ: ಆಯುಕ್ತರಿಂದ ಪರಿಶೀಲನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜೂ.4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ಲೋಕಸಭಾ ಚುನಾವಣೆಯ ಸಂಬಂಧ ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ನಗರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ. ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ 3 ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬರಲಿದೆ ಎಂದು ಹೇಳಿದರು.

ಇದನ್ನೂ ಓದಿ: ಎಂ.ಎಸ್​ ಧೋನಿ ಬಳಿಕ ಭಾರತೀಯ ಸೇನೆಯ ಅಧಿಕಾರಿಯಾಗಿ ಭವ್ಯ ನರಸಿಂಹಮೂರ್ತಿ ಆಯ್ಕೆ

ಮತ ಎಣಿಕೆ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಮತ ಎಣಿಕೆ ಏಜೆಂಟ್‌ಗಳನ್ನು ಬೆಳಗ್ಗೆ 6 ಗಂಟೆಗೆ ಬರಲು ತಿಳಿಸಲಾಗಿದೆ. ಯಾರಿಗೆ ಗುರುತಿನ ಚೀಟಿ ನೀಡಲಾಗಿದೆ ಅಂತಹವರಿಗೆ ಮಾತ್ರ ಮತ ಎಣಿಕೆ ಕೇಂದ್ರದ ಒಳಗೆ ಪ್ರವೇಶವಿರಲಿದೆ. ಒಂದು ಕೊಠಡಿಯಲ್ಲಿ 14 ಟೇಬಲ್‌ಗಳನ್ನು ಹಾಕಲು ಅವಕಾಶವಿದ್ದು, ದೊಡ್ಡ ಕೊಠಡಿಗಳಿದ್ದರೆ ಹೆಚ್ಚಿನ ಟೇಬಲ್‌ಗಳನ್ನು ಹಾಕಲಾಗುತ್ತದೆ ಎಂದರು.

ಮತ ಎಣಿಕಾ ಕೇಂದ್ರದಲ್ಲಿ ಸಿಸಿಟಿವಿ ಕಣ್ಗಾವಲು ಇರಲಿದೆ, ಅಬ್ಸರ್ವರ್​ಗಳು ಮತ್ತು ROಗಳ ಎದುರುಗಡೆಯೇ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಪೋಸ್ಟಲ್​ ಬ್ಯಾಲೆಟ್​​ಗಳು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದೆ ಅದರ ಎಣಿಕೆಯೂ ಪ್ರತ್ಯೆಕವಾದ ಕೊಠಡಿಯಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES