Sunday, October 6, 2024

ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ: ವಾಹನ ಸವಾರರು ಹೈರಾಣು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ಮುಂಗಾರು ಆರಂಭದಲ್ಲೇ ರಾಜ್ಯದ ಹಲವೆಡೆ ಪ್ರವಾಹದ ಸ್ಥಿತಿ ಕಂಡುಬಂದಿದೆ. ನಗರದ ಹಲವೆಡೆ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಅಲ್ಲಲ್ಲಿ ರಸ್ತೆಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರು ಪರದಾಡುವಂತಾಯಿತು.

ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮುಂಗಾರು ಅಬ್ಬರ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಟ್ರಾಫಿಕ್ ಜಾಮ್​​ನಿಂದ ವಾಹನ ಸವಾರರು ಹೈರಾಣು:

ವರುಣನ ಆರ್ಭಟದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್​ಜಾಮ್​​ನಿಂದ ವಾಹನ ಸವಾರರು ಹೈರಾಣಾಗಿದ್ದಾರೆ. ಕನಕಪುರ ಮುಖ್ಯ ರಸ್ತೆಯ ರೇಷ್ಮೆ ಸಂಸ್ಥೆ ಬಳಿ ವರುಣನ ಆರ್ಭಟದಿಂದ ಸಿಲಿಕಾನ್ ಸಿಟಿ ಮಂದಿ ತತ್ತರಿಸಿದ್ದಾರೆ. ಸತತ 1 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಬಹುತೇಕರು ಆಫೀಸ್‌ನಿಂದ ಮನೆಗೆ ತೆರಳುವರರು ಹೈರಾಣಾದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ ಎಕ್ಸಿಟ್ ಪೋಲ್ ಭವಿಷ್ಯ- ಮೋದಿ ಪ್ರತಿಕ್ರಿಯೆ

2 ಸಾವಿರ ಬಾಳೆ ಗಿಡಗಳು ನಾಶ:

ಮೈಸೂರು ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸುರಿದ ಮಳೆಯಿಂದ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಚಿಕ್ಕಹೊಮ್ಮ ಗ್ರಾಮದ ನಾಗೇಂದ್ರ ಎಂಬುವವರ ಜಮೀನಲ್ಲಿ ಎರಡು ಸಾವಿರ ಬಾಳೆ ಗಿಡ ನೆಲಕ್ಕುರುಳಿದೆ. ಕೈಯಿಗೆ ಬಂದ ತುತ್ತು ಬಾಯಿಗೆ ಇಲ್ಲದಂತೆ ಆಗಿದೆ. ನಿನ್ನೆ ಸಂಜೆ ಸುರಿದ ಮಳೆ ಹಾಗೂ ಗಾಳಿಗೆ ಅವಾಂತರ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಚಿಕ್ಕಹೊಮ್ಮ, ದೊಡ್ಡ ಹೊಮ್ಮ ಸೇರಿದಂತೆ ಹಲವೆಡೆ ಗಾಳಿ ಮಳೆಗೆ ಹತ್ತಾರು ಎಕರೆ ಬಾಳೆ ನಾಶವಾಗಿದೆ. ಲಕ್ಷಾಂತರ ರೂಪಾಯಿ ನಷ್ಟಕ್ಕೊಳಗಾದ ರೈತರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಮಳೆಯಿಂದ ಭಾರೀ ಅವಾಂತರ:

ಮೈಸೂರು ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸುರಿದ ಮಳೆಯಿಂದ ಭಾರೀ ಅವಾಂತರಗಳು ಸೃಷ್ಟಿಯಾಗಿವೆ. ಹುಣಸೂರು ತಾಲೂಕಿನ ಹನಗೋಡು ಸುತ್ತಮುತ್ತ ಭಾರಿ ಮಳೆಯಾಗಿದ್ದು ನಾಗಾಪುರ, ಹರಳಹಳ್ಳಿಯಲ್ಲಿ ಮನೆ ಮೇಲೆ ಮರ ಬಿದ್ದು ಹಾನಿಯಾಗಿದೆ. ಮತ್ತಿತರ ಕಡೆ ಬಿರುಗಾಳಿಗೆ ಮರಗಳು ಉರುಳಿವೆ. ನೂರಾರು ಎಕರೆ ಶುಂಠಿ, ತಂಬಾಕು, ಮುಸುಕಿನ ಜೋಳ ಬೆಳೆ ನಾಶವಾಗಿದೆ.

RELATED ARTICLES

Related Articles

TRENDING ARTICLES