Sunday, September 8, 2024

ಸುಧಾಕರ್​ಗೆ ಗೆಲುವು ಖಚಿತವಾಗುತ್ತಿದ್ದಂತೆ ಪ್ರದೀಪ್ ಈಶ್ವರ್​ ರಾಜೀನಾಮೆಗೆ ಪಟ್ಟು

ಚಿಕ್ಕಬಳ್ಳಾಪುರ: ಲೊಕಸಭಾ ಚುನಾವಣೆಯ ಮತಎಣಿಕೆ ಕಾರ್ಯವು ಇನ್ನೂ ನಡೆಯುತ್ತಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್​ ಅವರು ಭಾರಿ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಗೆಲುವು ಸಾಧಿಸಿರುವ ಬಗ್ಗೆ ಅಧಿಕೃತ ಘೋಷಣೆಯಷ್ಟೆ ಬಾಕಿ ಇರುವ ಬೆನ್ನಲ್ಲೇ ಶಾಸಕ ಪ್ರದೀಪ್‌ ಈಶ್ವರ್‌  ರಾಜೀನಾಮೆಗೆ ಒತ್ತಾಯ ಕೇಳಿ ಬರುತ್ತಿದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುಧಾಕರ್‌  ಅವರು ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ದ ಸುಮಾರು 7,2180 ಅಂತರಗಳಿಂದ ಮುನ್ನಡೆ ಸಾಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ.
ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಚಿಕ್ಕಬಳ್ಳಾಪುರದ ಹಾಲಿ ಶಾಸಕ ಪ್ರದೀಪ್​ ಈಶ್ವರ್​ ಅವರು ಹೇಳಿಕೆಯೊಂದನ್ನು ನೀಡಿದ್ದರು. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರು ಒಂದು ಮತದಿಂದ ಗೆದ್ದರೂ ನಾನು ಶಾಸಕ ಸ್ಥಾನದಿಂದ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದರು.
ಇಂದು ನಡೆಯುತ್ತಿರುವ ಚುನಾವಣಾ ಫಲಿತಾಂಶದಲ್ಲಿ ಸುಧಾಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ದ ಭಾರ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಇನ್ನು ಅಧಿಕೃತ ಘೋಷಣೆಯೊಂದೆ ಬಾಕಿ ಇರುವ ಹಿನ್ನೆಲೆ ಕೊಟ್ಟ ಮಾತಿನಂತೆ ಶಾಸಕ ಪ್ರದೀಪ್​ ಈಶ್ವರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸುಧಾಕರ್ ಬೆಂಬಲಿಗರು ಪಟ್ಟು ಹಿಡಿದಿದ್ದಾರೆ,

RELATED ARTICLES

Related Articles

TRENDING ARTICLES