Tuesday, September 17, 2024

ಹಾಸನದಲ್ಲಿ ಜೆಡಿಎಸ್​ ಚಿದ್ರ: 25 ವರ್ಷಗಳ ಬಳಿಕ ಕಾಂಗ್ರೆಸ್​ ಪತಾಕೆ

ಹಾಸನ: ಜೆಡಿಎಸ್​ ಭದ್ರಕೋಟೆಯಾಗಿದ್ದ ಹಾಸನ 25 ವರ್ಷಗಳ ಬಳಿಕ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸುವ ಮೂಲಕ. ದಳಪತಿಗಳಿಗೆ ಶಾಕ್​ ನೀಡಿದೆ. 25 ವರ್ಷಗಳ ಹಿಂದೆ ಪುಟ್ಟಸ್ವಾಮಿ ಗೌಡರನ್ನು ಎಚ್. ಡಿ. ದೇವೇಗೌಡರು ಸೋಲಿಸಿದ್ದರು. ಇದೀಗ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಪುಟ್ಟಸ್ವಾಮಿ ಗೌಡರ ಮೊಮ್ಮಗ ಶ್ರೇಯಸ್ ಪಟೇಲ್ ಅವರು ಮಣಿಸಿದ್ದಾರೆ ಇತಿಹಾಸ ಸೃಷ್ಟಿಸಿದ್ದಾರೆ.

ಸದ್ಯ ಹಾಲಿ ಸಂಸ್ ಪ್ರಜ್ವಲ್ ರೇವಣ್ಣ ಅವರು ರಾಸಲೀಲೆಗಳ ಪೆನ್​ಡ್ರೈವ್​ ಪ್ರಕರಣದಲ್ಲಿ SIT ವಶದಲ್ಲಿದ್ದು ತನಿಖೆ ಎದುರಿಸುತ್ತಿರುವ ನಡುವೆಯೇ ಸಂಸತ್ ಸದಸ್ಯ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಬಿಜೆಪಿ ಬೆಂಬಲಿತ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್ ರೇವಣ್ಣ ಅವರನ್ನು ಶ್ರೇಯಸ್ ಪಟೇಲ್ ಸೋಲಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ.

ಇದನ್ನೂ ಓದಿ: 🔥🔥 Loksabha Election 2024: ಫಲಿತಾಂಶದ ಕ್ಷಣಕ್ಷಣದ ಮಾಹಿತಿ🔥🔥

ಕಳೆದ ಬಾರಿಯ ಫಲಿತಾಂಶ:

2019ರಲ್ಲಿ ನಡೆದ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದರು. ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಪಕ್ಷ ಕೂಡಾ ಬೆಂಬಲ ನೀಡಿತ್ತು. ಏಕೆಂದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ – ಬಿಜೆಪಿ​ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎ. ಮಂಜು ಸುಮಾರು 5 ಲಕ್ಷದ 35 ಸಾವಿರ ಮತಗಳನ್ನು ಗಳಿಸಿದ್ದರಾದರೂ, 6 ಲಕ್ಷದ 76 ಸಾವಿರಕ್ಕೂ ಹೆಚ್ಚು ಮತ ಗಳಿಸಿದ್ದ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದರು.

ಈ ಬಾರಿ 2024ರ ಲೋಕಸಭ ಚುನಾವಣೆಯಲ್ಲಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಜೆಪಿ ಬೆಂಬಲ ನೀಡಿತ್ತು. ಪ್ರಜ್ವಲ್ ರೇವಣ್ಣ NDA ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್ ಪಕ್ಷವು ಮಾಜಿ ಸಂಸದ ದಿವಂಗತ ಜಿ. ಪುಟ್ಟಸ್ವಾಮಿ ಗೌಡ ಅವರ ಮೊಮ್ಮಗ ಎಂ. ಶ್ರೇಯಸ್ ಪಟೇಲ್ ಅವರನ್ನು ಕಣಕ್ಕಿಳಿಸಿತ್ತು. 25 ವರ್ಷಗಳ ಬಳಿಕ ಕಾಂಗ್ರೆಸ್​ ಭರ್ಜರಿ ಗೆಲುವ ಸಾಧಿಸುವ ಮೂಲಕ ಜೆಡಿಎಸ್​ಗೆ ಬಾರಿ ಮುಖಭಂಗ ಉಂಟುಮಾಡಿದೆ.

RELATED ARTICLES

Related Articles

TRENDING ARTICLES