Tuesday, September 17, 2024

Loksabha Election Result 2024: ರಾಜ್ಯದ ಮೂವರು ಮಾಜಿ ಸಿಎಂಗಳಿಗೆ ಭರ್ಜರಿ ಗೆಲುವು

ಬೆಂಗಳೂರು: ದೇಶಾದ್ಯಂತ ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ರಾಜ್ಯದಿಂದ ಸಂಸತ್ತಿಗೆ ಸ್ಪರ್ಧಿಸಿದ್ದ ಮೂವರು ಮಾಜಿ ಮುಖ್ಯಮಂತ್ರಿಗಳು ಗೆಲುವು ಸಾಧಿಸಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಜಗದೀಶ್‌ ಶೆಟ್ಟರ್‌ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ.

ಸದ್ಯ ಈ ಮೂವರು ನಾಯಕರು ರಾಜ್ಯ ರಾಜಕಾರಣಕ್ಕೆ ಸೀಮಿತವಾಗಿದ್ದರು. ಇನ್ನು ಮುಂದೆ ಸಂಸದರಾಗಿ ರಾಷ್ಟ್ರ ಮಟ್ಟದ ರಾಜಕೀಯಲ್ಲಿ ತೊಡಗಿಕೊಳ್ಳಲಿದ್ದಾರೆ.

ಇದನ್ನೂ ಓದಿ:ಬೆಂಗಳೂರು ಗ್ರಾಮಾಂತರದಲ್ಲಿ ಗೆದ್ದು ಬೀಗಿದ ಡಾ, ಮಂಜುನಾಥ್​: ಕಾಂಗ್ರೆಸ್​ಗೆ ಮುಖಭಂಗ

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್​ ಚಂದ್ರು ವಿರುದ್ದ ಮೈತ್ರಿ ಅಭ್ಯರ್ಥಿ ಹೆಚ್​ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದು ಒಟ್ಟು 2,82,056 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿ ಆನಂದಸ್ವಾಮಿ ಗಡ್ಡ ದೇವರ ಮಠ ವಿರುದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು 29,097 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಇನ್ನು, ವಿಧಾನಸಭಾ ಚುನಾವಣೆಯಲ್ಲಿ ತಮಗೆ ಟಿಕೆಟ್​ ನೀಡದ ಹಿನ್ನೆಲೆ ಬಹಿರಂಗವಾಗಿ ಮುನಿಸು ಹೊರಹಾಕಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್​ ಸೇರಿದ್ದರು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿ ಬಳಿಕ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ 68792 ಮತಗಳ ಅಂತರದಲ್ಲಿ ತಮ್ಮ ಸಮೀಪ ಸ್ಫರ್ಧಿ ಮೃಣಾಲ್​ ಹೆಬ್ಬಾಳ್​ಕರ್​ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ.

RELATED ARTICLES

Related Articles

TRENDING ARTICLES