ಬೆಂಗಳೂರು: ಬಿಜೆಪಿಯವರು ರಾಜಭವನಕ್ಕೆ ಹೋದರೆ ಹೋಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷದವರ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ವಿಧಾನಸೌಧದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ನಿಗಮದ ಅವ್ಯವಹಾರ ಕುರಿತ ತನಿಖೆಗೆ ಎಸ್ಐಟಿ ರಚನೆ ಆಗಿದೆ. ಅವರು ತನಿಖೆ ಮಾಡ್ತಿದ್ದಾರೆ. ತನಿಖೆ ಮುಗಿಯಲಿ ಎಂದಿದ್ದಾರೆ.
ಸಚಿವ ನಾಗೇಂದ್ರ ಅವರನ್ನ ಕರೆದು ಮಾತಾಡಿದ್ರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ಎಲ್ಲಾ ಸಚಿವರನ್ನು ಕರೆದು ಮಾತಾಡ್ತೀನಿ. ಅವರನ್ನ ಕರೆಸಿ ಮಾತಾಡಿದ್ದೀನಿ ಅಂದ್ರೆ ರಾಜೀನಾಮೆ ಕೊಡಿ ಅಂತಾ ನಾ ಎಂದು ಹೇಳಿದರು.