Tuesday, September 17, 2024

ನಾನೀಗ ರಾಜಕಾರಣಿ, ಸಿನಿಮಾ ಮಾಡುವುದು ಕಂಪ್ಲೀಟ್​ ಬಂದ್​ ಮಾಡಿದ್ದೇನೆ: ನಿಖಿಲ್​ ಕುಮಾರಸ್ವಾಮಿ

ಮಂಡ್ಯ: ನಾನು ಈಗ ರಾಜಕಾರಣಿ ಇನ್ಮುಂದೆ ಸಿನಿಮಾ ಮಾಡುವುದನ್ನು ಬಂದ್​ ಮಾಡಿದ್ದೇನೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರು ಇಂದು ಮಂಡ್ಯದಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅವರು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಮತ್ತು ಕೋಲಾರದಲ್ಲಿ ಜೆಡಿಎಸ್​ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಜೆಡಿಎಸ್ ಮಂಡ್ಯ, ಕೋಲಾರ ಕ್ಷೇತ್ರವನ್ನು ಗೆದ್ದು ಬೀಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯಕ್ಕೆ ಭೇಟಿ ಕೊಟ್ಟ ನಿಖಿಲ್ ಕುಮಾರಸ್ವಾಮಿ ಅವರು ನಾನು‌ ಇನ್ನು ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ. ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡ್ತೀನಿ. ನಾನು ಇನ್ನು ಫುಲ್‌ ಟೈಮ್ ರಾಜಕಾರಣಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಭವಾನಿ ರೇವಣ್ಣಗೆ ತಾತ್ಕಾಲಿಕ ರಿಲೀಫ್​: ಮಧ್ಯಂತರ ನಿರೀಕ್ಷಣಾ ಜಾಮೀನು ಮಜೂರು

2019ರ ನನ್ನ ಸೋಲು ಸೋಲಾಗಿರಲಿಲ್ಲ. ನಮ್ಮಲ್ಲಾದ ತಪ್ಪುಗಳಿಂದ ಹಿನ್ನಡೆ ಆಯಿತು. ಮಂಡ್ಯ ಜನ ನನಗೆ ಹೃದಯದಲ್ಲಿ ಸ್ಥಾನ ನೀಡಿದ್ದಾರೆ. ಕುಮಾರಣ್ಣ ಸಿಎಂ ಆಗಿದ್ದಾಗ ರಾಜ್ಯಕ್ಕೆ ಕೊಟ್ಟ ಕೊಡುಗೆ ಅಪಾರ. ಕುಮಾರಣ್ಣ ಸ್ಪರ್ಧೆಗೆ ಕಾರ್ಯಕರ್ತರ‌ ಅಪೇಕ್ಷೆ ಇತ್ತು. ಮಹಿಳೆಯರು, ರೈತರು, ಹಿರಿಯರು ಎಲ್ಲಾ ವರ್ಗದವರು ಕುಮಾರಣ್ಣ ಅವರನ್ನ ಹೆಚ್ಚಿನ ಅಂತರದಲ್ಲಿ ಆಯ್ಕೆ ಮಾಡಿದ್ದಾರೆ.

ಮುಂದಿನ 5 ವರ್ಷ‌ ಮಂಡ್ಯ ಸಂಸದರಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾರೆ. ಕುಮಾರಣ್ಣರ ಮೇಲೆ ಇಟ್ಟಿರುವ ಗೌರವ ಪ್ರೀತಿ, ವಿಶ್ವಾಸ ಉಳಿಸಿಕೊಳ್ತೀವಿ‌. ಕಾಂಗ್ರೆಸ್ಸಿಗರ ಟೀಕೆಗಳಿಗೆ ಮಂಡ್ಯ ಜನ ಉತ್ತರ ಕೊಟ್ಟಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಇದರೊಂದು ಮುಂದಿನ ರಾಜ್ಯಾಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುವ ಸಾಧ್ಯತೆ ಇದೆ ಎನ್ನುವ ಸುಳಿವನ್ನು ನಿಖಿಲ್ ಕುಮಾರಸ್ವಾಮಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES