Tuesday, September 17, 2024

ಚುನಾವಣೆ ವೇಳೆ ಬಾರ್​ ಬಂದ್​: 5 ದಿನಕ್ಕೆ ಒಂದು ಸಾವಿರ ಕೋಟಿ ನಷ್ಟ

ಬೆಂಗಳೂರು: ಚುನಾವಣೆಯಿಂದಾಗಿ ಐದು ದಿನಗಳ ಕಾಲ ಮದ್ಯ ಮಾರಾಟ ಬಂದ್​ ಮಾಡಿದ ಹಿನ್ನೆಲೆ  ಒಂದು ಸಾವಿರ ಕೋಟಿ ನಷ್ಟವಾಗಿದೆ ಎಂದು ಬಾರ್​ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಕರುಣಾಕರ್​ ಹೆಗ್ಡೆ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೆಲ ದಿನಗಳ ಹಿಂದೆ ಮುಕ್ತಾಯವಾದ ಪದವೀದರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್​ ಸ್ಥಾನಕ್ಕೆ ನಡೆದ ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗವು ಬೆಂಗಳೂರಿನಲ್ಲಿ ಐದು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧ ಹೇರಿತ್ತು. ಈ ಹಿನ್ನೆಲೆ 12 ಸಾವಿರ ಸನ್ನದುದಾರರು ಬಾರ್​ ಬಂದ್ ಮಾಡಿದ್ದರು. ಇದರಿಂದ ಸರ್ಕಾರಕ್ಕೆ 500 ಕೋಟಿ. ಸನ್ನದುದಾರರಿಗೆ 500 ಕೋಟಿ ನಷ್ಟ ಉಂಟಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜೂನ್‌ 12ಕ್ಕೆ ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಪದಗ್ರಹಣ

ಸರ್ಕಾರಕ್ಕೆ 40 ಸಾವಿರ ಕೋಟಿ ವರ್ಷಕ್ಕೆ ರಾಜಸ್ವ ನೀಡಬೇಕು ಅಂದರೆ ಸರಿಸುಮಾರು ಒಂದು ದಿನಕ್ಕೆ 150 ಕೋಟಿ ರಾಜಸ್ವ ಬರುತ್ತೆ, ಈ ರೀತಿ ಬಾರ್ ಕ್ಲೋಸ್ ಮಾಡುವುದರಿಂದ ಸಾಕಷ್ಟು ನಷ್ಟವಾಗುತ್ತೆ. ಸನ್ನದಾರರು ಅವರ ದೈನದಿಂದ ಖರ್ಚು ಸೇರಿದಂತೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಲಾಸ್ ಆಗಿದೆ. ಸರ್ಕಾರ ಮಟ್ಟದಲ್ಲಿ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗ್ತಿಲ್ಲ ಕೇವಲ ಒಂದು ದಿನ ರಜೆ ನೀಡುವಂತೆ ಕಾನೂನು ತಿದ್ದುಪಡಿ ಮಾಡಬೇಕೆಂದು ಮನವಿ ಮಾಡುತ್ತೇವೆ ಎಂದು  ಅವರು ಹೇಳಿದ್ದಾರೆ.

RELATED ARTICLES

Related Articles

TRENDING ARTICLES