Tuesday, July 9, 2024

ಜನರಿಗೆ ಕಾಂಗ್ರೆಸ್​ ಗ್ಯಾರೆಂಟಿ ಇಷ್ಟ ಆಗಿಲ್ಲ, ಯೋಜನೆ ನಿಲ್ಲಿಸುವ ಬಗ್ಗೆ ಸಿಎಂ ಮರು ಪರಿಶೀಲನೆ ಮಾಡಬೇಕು: ಲಕ್ಷ್ಮಣ್​

ಮೈಸೂರು: ಜನರಿಗೆ ಕಾಂಗ್ರೆಸ್  ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಆದ್ದರಿಂದ ಈ ಯೋಜನೆಯ ಬಗ್ಗೆ ಮುಖ್ಯಮಂತ್ರಿಗಳು ಮರುಪರಿಶೀಲನೆ ಮಾಡುವುದು ಒಳಿತು ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅಸಮಾಧಾನ ಹೊರಹಾಕಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿತ್ತು. ಜನರು ಬಿಜೆಪಿ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಲೇ ಅಲ್ವಾ? ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗ ಮರು ಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ ಗಮನಹರಿಸಬೇಕು. 70% ರಷ್ಟು ಮೇಲ್ವರ್ಗದವರು ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಆದರೆ ಅದನ್ನು ಜನರು ತಿರಸ್ಕಾರ ಮಾಡಿದ್ದಾರೆ ಎಂದರು.

25,000 ಸಾವಿರ ಸಂಬಳ ಪಡೆಯುವ ವ್ಯಕ್ತಿಗೂ 25 ಲಕ್ಷ ಕಾರು ಹೊಂದಿರುವವರಿಗೂ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ಮರು ಪರಿಶೀಲನೆ ಮಾಡುವ ಅಗತ್ಯ ಇದೆ. ಇದಕ್ಕೆ ಉದಾಹರಣೆ ಎಂದರೆ ಹುಣಸೂರಿನ ಹಲವು ಹಳ್ಳಿಗಳಲ್ಲಿ ಕೇವಲ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600ಕ್ಕೂ ಹೆಚ್ಚು ಮತ ನೀಡಿದ್ರೆ ನನಗೆ ಕೇವಲ ಮೂರು, ಏಳು ಮತಗಳನ್ನ ನೀಡಿದ್ದಾರೆ. ಒಕ್ಕಲಿಗರು ನನಗೆ ಮತ ಹಾಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈಗಾಗಲೇ 5 ವರ್ಷಗಳಿಗೆ ಜಾರಿಯಾಗಿರುವ ಉಚಿತ ಗ್ಯಾರೆಂಟಿ ಯೋಜನೆಗಳನ್ನು ಈ ಸಂದರ್ಭದಲ್ಲಿ ಮರುಪರಿಶೀಲನೆ ಮಾಡಲು ಸಾಧ್ಯತೆ ಇದೆಯ ಎಂಬ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಯಾಕೆ ಸಾಧ್ಯವಿಲ್ಲ, ಉಳ್ಳವರು ಇಲ್ಲದವರ ಪುನರ್​​ವಿಂಗಡಣೆ ಮಾಡುವುದು ಸಾಧ್ಯವಿದೆ. ಅದಕ್ಕೆ ಆದ ಮಾನದಂಡಗಳಿದೆ. ಇದಕ್ಕೆ ಉದಾಹರಣೆ ದೆಹಲಿಯಲ್ಲಿ ಈಗಾಗಲೇ ಉಚಿತವಾಗಿ ನೀಡುತ್ತಿದ್ದ ವಿದ್ಯುತ್ ಸೌಲಭ್ಯವನ್ನು ನಿಲ್ಲಿಸಿದ್ದಾರೆ. ಈ ಆದೇಶ ಇಂದಿನಿಂದಲೇ ಜಾರಿಯಾಗಲಿದೆ. ಇದರಲ್ಲಿ ಸಮಸ್ಯೆ ಏನಿದೆ. ನಿಜವಾಗಲು ಅವಶ್ಯಕತೆ ಇರುವವರಿಗೆ ನೀಡಿ ಉಳ್ಳವರಿಗೆ ನಿಲ್ಲಿಸುವ ಬಗ್ಗೆ ಮುಖ್ಯಮಂತ್ರಿಗಳು ಮರುಪರೀಶಲನೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

RELATED ARTICLES

Related Articles

TRENDING ARTICLES