Wednesday, July 3, 2024

ವಿರೋಧ ಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ನವದೆಹಲಿ: ಕೇಂದ್ರದಲ್ಲಿ NDA ಸರ್ಕಾರ ರಚನೆಯಾಗುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕನ ಆಯ್ಕೆಗೆ ಕಾಂಗ್ರೆಸ್ ನಲ್ಲಿ ಚರ್ಚೆಗಳು ಆರಂಭವಾಗಿವೆ. ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಚರ್ಚೆ ನಡೆಸಲು ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ.

CWCಸಭೆಯ ಬಳಿಕ ಮಾತನಾಡಿರುವ ಕಾಂಗ್ರೆಸ್ ಸಂಸದರಾದ ಕುಮಾರಿ ಸೆಲ್ಜಾ, ರಾಹುಲ್ ಗಾಂಧಿ ವಿಪಕ್ಷದ ನಾಯಕರಾಗಬೇಕೆಂಬುದು CWCಯ ಇಚ್ಛೆಯಾಗಿದೆ ಎಂದು ಹೇಳಿದ್ದಾರೆ. ಕೆಸಿ ವೇಣುಗೋಪಾಲ್ ಮಾತನಾಡಿ, ವಿಪಕ್ಷ ನಾಯಕರಾಗುವಂತೆ CWC ಸಭೆ ಸರ್ವಾನುಮತದಿಂದ ರಾಹುಲ್ ಗಾಂಧಿ ಅವರಲ್ಲಿ ಮನವಿ ಮಾಡಿದೆ. ಸಿಡಬ್ಲ್ಯುಸಿ ನಿರ್ಣಯ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿಯವರ ಪ್ರಯತ್ನಗಳನ್ನು ಶ್ಲಾಘಿಸಿದೆ.

ಚುನಾವಣಾ ಫಲಿತಾಂಶದ ಅವಲೋಕನ:

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. 2024ರ ಲೋಕಸಭೆ ಚುನಾವಣೆಯ ನಂತರ ಪಕ್ಷದ ಮೊದಲ ಸಭೆಯಾಗಿದೆ. ಇನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶದ ಅವಲೋಕನ ನಡೆದಿದೆ.

ಕಳೆದ ಕೆಲವು ತಿಂಗಳುಗಳಿಂದ ಕಾಂಗ್ರೆಸ್ ನಾಯಕರು ಮತ್ತು ದೇಶಾದ್ಯಂತದ ಲಕ್ಷಾಂತರ ಕಾರ್ಯಕರ್ತರ ಅಚಲ ನಿರ್ಧಾರ ಮತ್ತು ಕಠಿಣ ಪರಿಶ್ರಮಕ್ಕಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುವ ಮೂಲಕ ಖರ್ಗೆ ಸಭೆಯಲ್ಲಿ ತಮ್ಮ ಮಾತು ಆರಂಭಿಸಿದ್ದಾರೆ.

ಇದನ್ನೂ ಓದಿ: ಡಿಕೆ ಸುರೇಶ್​ ಸೋಲಿಗೆ ಸಿದ್ದರಾಮಯ್ಯ ಅಂಡ್​ ಟೀಂ ಕಾರಣ: ಶಾಸಕ ಸುರೇಶ್ ಗೌಡ

ಸಾರ್ವಜನಿಕರು ನಮ್ಮ ಮೇಲೆ ನಂಬಿಕೆಯನ್ನು ವ್ಯಕ್ತಪಡಿಸುವ ಮೂಲಕ ಸರ್ವಾಧಿಕಾರಿ ಶಕ್ತಿಗಳು ಮತ್ತು ಸಂವಿಧಾನ ವಿರೋಧಿ ಶಕ್ತಿಗಳಿಗೆ ಬಲವಾದ ಪ್ರತ್ಯುತ್ತರವನ್ನು ನೀಡಿದ್ದಾರೆ. ಭಾರತದ ಮತದಾರರು ಬಿಜೆಪಿಯ 10 ವರ್ಷಗಳ ವಿಭಜನೆ, ದ್ವೇಷ ಮತ್ತು ಧ್ರುವೀಕರಣದ ರಾಜಕೀಯವನ್ನು ತಿರಸ್ಕರಿಸಿದ್ದಾರೆ. ಪ್ರತಿಕೂಲ ಸಂದರ್ಭಗಳಲ್ಲಿ ಚುನಾವಣೆಯಲ್ಲಿ ಹೋರಾಡಿ ಗೆದ್ದ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಕಾಂಗ್ರೆಸ್ ಸದಸ್ಯರಿಗೆ ಅಭಿನಂದನೆಗಳು ಎಂದು ಖರ್ಗೆ ಹೇಳಿದ್ದಾರೆ.

ರಾಯಬರೇಲಿ ರಾಹುಲ್‌ ಗಾಂಧಿ.. ವಯನಾಡು?:

ಲೋಕಸಭೆಯ ವಿರೋಧ ಪಕ್ಷದ ನಾಯಕನ ಹುದ್ದೆಯನ್ನು ಸ್ವೀಕರಿಸುವ ಬಗ್ಗೆ ಹಾಗೂ ಗೆದ್ದಿರುವ 2 ಲೋಕಸಭಾ ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎನ್ನುವುದರ ಬಗ್ಗೆ ರಾಹುಲ್ ಗಾಂಧಿ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಕಾರ್ಯಕಾರಿ ಸಮಿತಿ ಸಭೆ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಈ ವಿಷಯನ್ನು ತಿಳಿಸಿದರು. ಗೆದ್ದಿರುವ ಎರಡು ಕ್ಷೇತ್ರಗಳ ಪೈಕಿ ಯಾವ ಕ್ಷೇತ್ರವನ್ನು ರಾಹುಲ್ ಗಾಂಧಿ ಉಳಿಸಿಕೊಳ್ಳಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಜೂನ್ 17ಕ್ಕೂ ಮುನ್ನ ಈ ಬಗ್ಗೆ ಅವರು ನಿರ್ಧರಿಸಲಿದ್ದಾರೆ. 3-4 ದಿನಗಳಲ್ಲಿ ತೀರ್ಮಾನ ಗೊತ್ತಾಗಲಿದೆ ಎಂದರು.

ಸಂವಿಧಾನ ರಕ್ಷಣೆಗೆ ಜನತೆಯ ಬೆಂಬಲ:

ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ದೇಶದಾದ್ಯಂತ ಕಾಂಗ್ರೆಸ್‌ಗೆ ಜನರಿಂದ ಅಪಾರ ಬೆಂಬಲ ಸಿಕ್ಕಿದೆ.
ಜನರು ನಮ್ಮ ಮೇಲೆ ನಂಬಿಕೆಯನ್ನಿಡುವ ಮೂಲಕ ಸರ್ವಾಧಿಕಾರಿ ಶಕ್ತಿಗಳು ಹಾಗೂ ಸಂವಿಧಾನ ವಿರೋಧಿ ಶಕ್ತಿಗಳಿಗೆ 7 ಪ್ರಬಲ ತಿರುಗೇಟು ನೀಡಿದ್ದಾರೆ. ಬಿಜೆಪಿಯ 10 ವರ್ಷಗಳ ವಿಭಜನೆ, ದ್ವೇಷ ಹಾಗೂ ಧ್ರುವೀಕರಣ ರಾಜಕಾರಣವನ್ನು ದೇಶದ ಮತದಾರರು ತಿರಸ್ಕರಿಸಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿರುವ ಎಲ್ಲರಿಗೂ ಸಿಡಬ್ಲ್ಯುಸಿ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಒಂದು ತಂಡದಂತೆ ಕೆಲಸ ಮಾಡಿದ ಎಲ್ಲ ನಾಯಕರಿಗೂ ಧನ್ಯವಾದಗಳು. ಕಠಿಣ ಪರಿಶ್ರಮ ಹಾಗೂ ಸಂಕಲ್ಪದಿಂದ ಎದುರಾಳಿಗಳನ್ನು ಸೋಲಿಸಬಹುದು ಎಂದು ಯಾವಾಗಲೂ ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ಅವರು ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಹೇಳಿದ್ದಾರೆ.

RELATED ARTICLES

Related Articles

TRENDING ARTICLES