ಬೆಂಗಳೂರು ಗ್ರಾಮಾಂತರ: ವಿದ್ಯುತ್ ಸ್ಪರ್ಶದಿಂದ ಡಾ.ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೊಸಕೋಟೆ ನಗರದಲ್ಲಿ ನಡೆದಿದೆ.
ಹೊಸಕೋಟೆ ತಾಲೂಕಿನ ಸೂಲಿಬೆಲೆ ನಿವಾಸಿ ಸಾಯಿಭವನ (13) ಮೃತ ಬಾಲಕ, ಕಳೆದ ಎರಡು ವರ್ಷಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದ ಸಾಯಿಭವನ್, ಬೆಳಗ್ಗೆ ವಸತಿ ಶಾಲೆ ಕಟ್ಟಡದ ಮೇಲೆ ಬಟ್ಟೆ ಹಾಕಲು ಹೋದಾಗ ವಿದ್ಯುತ್ ಶಾಕ್ ತಗುಲಿದೆ. 11Kw ವಿದ್ಯುತ್ ತಂತಿ ಆಗಿದ್ದರಿಂದ ಶಾಕ್ಗೆ ವಿದ್ಯಾರ್ಥಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಇದನ್ನೂ ಓದಿ: ಮೋದಿ ಸಂಪುಟದಲ್ಲಿ ಹೆಚ್.ಡಿ ಕುಮಾರಸ್ವಾಮಿಗೆ ಪೆಟ್ರೋಲಿಯಂ ಖಾತೆ!
ಮೃತ ಬಾಲಕನ ದೇಹವನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನೆ ಸಂಬಂಧ ಮೃತ ವಿದ್ಯಾರ್ಥಿ ಪೋಷಕರು ಹೊಸಕೋಟೆ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.