Saturday, October 5, 2024

ಚಂದನ್​ ಶೆಟ್ಟಿ-ನಿವೇದಿತಾ ಡೈವೋರ್ಸ್​ ಬಗ್ಗೆ ತುಪ್ಪದ ಹುಡುಗಿ ರಾಗಿಣಿ ಪ್ರತಿಕ್ರಿಯೆ

ಬೆಂಗಳೂರು: ಕನ್ನಡ ರ್ಯಾಪರ್​, ಬಿಗ್​ಬಾಸ್​ ಕನ್ನಡ ಸೀಸನ್-​5 ಸ್ಪರ್ಧಿಗಳಾದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಜೂನ್.7 ರಂದು  ವಿಚ್ಚೇದನ ಪಡೆದು ಅವರ ಅಭಿಮಾನಿಗಳಿಗೆ ಶಾಕ್​ ನಿಡಿದ್ದಾರೆ. ಇವರಿಬ್ಬರ ವಿಚ್ಚೇದನದ ಕುರಿತು ಮೊದಲ ಬಾರಿಗೆ ಸ್ಯಾಂಡಲ್​ವುಡ್​ ನಟಿ ರಾಗಿಣಿ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿ ಅವರು, ಚಂದನ್​ ಶೆಟ್ಟಿ ಹಾಗು ನಿವೇದಿತಾ ಗೌಡ ಇಬ್ಬರ ವೈಯಕ್ತಿಕ ವಿಚಾರಕ್ಕೆ ನಾನು ಕಾಮೆಂಟ್ ಮಾಡಲ್ಲ. ಲೈಫ್ ಇಸ್ ನಾಟ್ ಈಸಿ ಜೀವನದಲ್ಲಿ ಏರಿಳಿತಗಳು ಇರುತ್ತವೆ. ನಾವೇನು ಕಾಂಟ್ರಿಬ್ಯೂಟ್ ಮಾಡದೇ ಇದ್ದಮೇಲೆ, ನಾವೇನು ಕಾಮೆಂಟ್ ಮಾಡೋಕೆ ಹೋಗಬಾರದು ಎಂದು ನಟಿ ಉತ್ತಿರಿಸಿದ್ದಾರೆ.

ಇದನ್ನೂ ಓದಿ: ಚಂದನ್​ ಶೆಟ್ಟಿ-ನಿವೇದಿತಾ ಡೈವೋರ್ಸ್​: ನಟ ಪ್ರಥಮ್​ ಪ್ರತಿಕ್ರಿಯೆ

ಬಿಗ್​ ಬಾಸ್​ ಕನ್ನಡ ಸೀಸನ್​ -5 ಬಳಿಕ ಖ್ಯಾತಿ ಗಳಿಸಿದ್ದ ಈ ಇಬ್ಬರು 2020ರಲ್ಲಿ ಎರಡು ಕುಟುಂಬಗಳ ಒಪ್ಪಿಗೆ ಮೇರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಷ್ಟು ದಿನಗಳ ಕಾಲ ಅನ್ಯೋನ್ಯವಾಗಿದ್ದ ಅವರು, ಸೋಶಿಯಲ್​ ಮೀಡಿಯಾದಲ್ಲೂ ಫುಲ್​ ಆ್ಯಕ್ಟೀವ್​ ಆಗಿದ್ದರು. ನಟಿ ನಿವೇದಿತಾ ಗೌಡ ಹಾಗೂ ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಆಗಾಗ ತಮ್ಮ ಪೋಸ್ಟ್‌ ಹಾಗೂ ರೀಲ್ಸ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಿದ್ದರು.

ಹಿಂದೊಮ್ಮೆ ಅಂಡರ್​ ವಾಟರ್​ ಶೂಟ್​ ಮಾಡಿರುವ ಜೋಡಿ ಲಿಪ್‌ ಕಿಸ್‌ ಮಾಡಿದ ರೊಮ್ಯಾಂಟಿಕ್​ ವಿಡಿಯೊ ಶೇರ್‌ ಮಾಡಿಕೊಂಡಿತ್ತು. ಸಾವಿರಾರು ಜನರು ಲೈಕ್​ ಮಾಡಿದ್ದರು. ಕೆಲವರು ಈ ವಿಡಿಯೊಗೆ ಮೆಚ್ಚುಗೆ ಸೂಚಿಸಿದರೆ ಇನ್ನು ಕೆಲವರು ನೆಗೆಟಿವ್​ ಕಮೆಂಟ್​ ಕೂಡ ಮಾಡಿದ್ದರು. ಆದರೇ, ಈ ಜೋಡಿ ವಿಚ್ಚೇದನ ಪಡೆದಿರುವುದು ಅವರ ಅಭಿಮಾನಿಗಳಿಗೆ ಶಾಕ್​ ಆಗಿದೆ.

RELATED ARTICLES

Related Articles

TRENDING ARTICLES