Tuesday, September 17, 2024

ಮೋದಿ ಸಂಪುಟದಲ್ಲಿ ಹೆಚ್​.ಡಿ ಕುಮಾರಸ್ವಾಮಿಗೆ ಪೆಟ್ರೋಲಿಯಂ ಖಾತೆ!

ದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಪದಗ್ರಹಣ ಕಾರ್ಯಕ್ರಮಕ್ಕೆ ಮಂಡ್ಯ ಸಂಸದ ಹೆಚ್​.ಡಿ ಕುಮಾರಸ್ವಾಮಿ ಯವರಿಗೆ ಆಹ್ವಾನ ಬಂದಿದ್ದು ಕೇಂದ್ರ ಸಚಿವ ಸ್ಥಾನ ಸಿಗುವುದು ಖಚಿತ ಎನ್ನಲಾಗಿದೆ.

ರಾಜ್ಯದಲ್ಲಿ ಲೋಕಸಭಾ ಚುನಾವಣೆ ವೇಳೆ ಜೆಡಿಎಸ್​ ಪಕ್ಷವು ಎನ್​ಡಿಎಗೆ ಬೆಂಬಲ ಸೂಚಿಸಿದಂದಿನಿಂದಲೂ ಕುಮಾರಸ್ವಾಮಿ ಗೆದ್ದರೇ ಸಚಿವ ಸ್ಥಾನ ಸಿಗುವುದು ಗ್ಯಾರೆಂಟಿ ಅದರಲ್ಲೂ ಕೃಷಿ ಖಾತೆಯೇ ಸಿಗಲಿದೆ ಎಂದು ಹೇಳಲಾಗುತ್ತಿತ್ತು. ಆದರೇ ಕುಮಾರಸ್ವಾಮಿಗೆ ಕೃಷಿ ಖಾತೆ ಬದಲಿಗೆ ಪೆಟ್ರೋಲಿಯಂ ಖಾತೆ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಇಂದು ಸಂಜೆ 7.15ಕ್ಕೆ ಮೋದಿ ಪದಗ್ರಹಣ: ಮಹಾತ್ಮ ಗಾಂಧಿ ಸ್ಮಾರಕಕ್ಕೆ ನಮನ

ಮೋದಿ 3.0 ಸರ್ಕಾರದಲ್ಲಿ ಕುಮಾರಸ್ವಾಮಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುತ್ತಿದೆ. ಈ ಹಿನ್ನೆಲೆ ಈಗಾಗಲೇ ಹೆಚ್​ಡಿ ಕುಮಾರಸ್ವಾಮಿ ಕುಟುಂಬ ಕಾರ್ಯಕ್ರಮದಲ್ಲಿ ಭಾಗಿಯಾಗಲು ದೆಹಲಿ ತೆರಳಿದ್ದಾರೆ.

ಇಂದು ಸಂಜೆ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES