Sunday, September 8, 2024

T20 world Cup 2024: ಭಾರತ-ಪಾಕಿಸ್ತಾನ್​ ಹೈವೋಲ್ಟೇಜ್​ ಪಂದ್ಯಕ್ಕೆ ಕ್ಷಣಗಣನೆ

T20 World Cup 2024 ನ್ಯೂಯಾರ್ಕ್​: ಭಾರತ ಪಾಕಿಸ್ತಾನ ನಡುವೆ ಇಂದು ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ಟಿ20 ವರ್ಲ್ಡ್​ಕಪ್​ನ ಹೈವೋಲ್ಟೇಜ್​ ಪಂದ್ಯ ನಡೆಯಲಿದ್ದು ಈ ಪಂದ್ಯಕ್ಕಾಗಿ ಎರಡೂ ದೇಶಗಳ ಕ್ರಿಕೆಟ್​ ಅಭಿಮಾನಿಗಳು ಪಂದ್ಯದ ರೋಚಕ ಕ್ಷಣವನ್ನು ಕಣ್ತುಂಬಿಸಿಕೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ.

ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ ರಣರೋಚಕ ಹೋರಾಟ ನಡೆಸಿದ್ದ ಉಭಯ ತಂಡಗಳು ಇಂದೂ ಸಹ ಭರ್ಜರಿ ಪೈಪೋಟಿ ನೀಡುವ ನಿರೀಕ್ಷೆಯಿದೆ. ಅದರಲ್ಲೂ ನಸ್ಸೌ ಕೌಂಟಿ ಪಿಚ್​ ಬೌಲರ್​ಗಳಿಗೆ ಸಹಕಾರಿ ಎಂಬುದು ಈಗಾಗಲೇ ಸಾಬೀತಾಗಿದೆ. ಅತ್ತ ಪಾಕಿಸ್ತಾನ್ ತಂಡದಲ್ಲಿ ಅತ್ಯುತ್ತಮ ಬೌಲರ್​ಗಳಿದ್ದರೆ, ಇತ್ತ ಭಾರತ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದೆ. ಹೀಗಾಗಿ ಇಂದಿನ ಪಂದ್ಯವು ಬ್ಯಾಟರ್ ಮತ್ತು ಬೌಲರ್​ಗಳ ನಡುವಣ ಅಸಲಿ ಕದನವಾಗಿ ಮಾರ್ಪಡಲಿದೆ.

ಇದನ್ನೂ ಓದಿ: ಮೋದಿ ಸಂಪುಟದಲ್ಲಿ ಹೆಚ್​.ಡಿ ಕುಮಾರಸ್ವಾಮಿಗೆ ಪೆಟ್ರೋಲಿಯಂ ಖಾತೆ!

ಈ ಪಂದ್ಯವು ಅಮೆರಿಕ ಕಾಲಮಾನ ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಲ್ಲಿ ಡೇ ಪಂದ್ಯವಾಗಿದ್ದರೂ, ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯದ ನೇರ ಪ್ರಸಾರ ಇರಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.

RELATED ARTICLES

Related Articles

TRENDING ARTICLES