Wednesday, July 3, 2024

ವಿದೇಶದಲ್ಲಿದ್ದಾಗ ಪ್ರಜ್ವಲ್​​ಗೆ ಹಣ ಕಳಿಸಿದ್ದ ಗೆಳತಿಗೆ ಸಂಕಷ್ಟ

ಬೆಂಗಳೂರು: ಪ್ರಜ್ವಲ್ ರೇವಣ್ಣ ರಾಸಲೀಲೆಗಳ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿದ್ದಾಗ ಪ್ರಜ್ವಲ್​ ಗೆ ಹಣದ ಸಹಾಯ ಮಾಡಲಾಗಿದೆ ಎನ್ನುವ ಕಾರಣಕ್ಕೆ ಪ್ರಜ್ವಲ್​ ರೇವಣ್ಣ ಗೆಳತಿಗೂ ಈಗ ಸಂಕಷ್ಟ ಶುರುವಾಗಿದೆ.

ವಿದೇಶದಲ್ಲಿದ್ದಾಗ ಪ್ರಜ್ವಲ್​ಗೆ ನೆರವಾಗಿರುವವರ ಬಗ್ಗೆ ಪ್ರಜ್ವಲ್ ಬಾಯ್ಬಿಡುತ್ತಿಲ್ಲ. ಹಣ ವರ್ಗಾವಣೆ ಕುರಿತು ಕೇಳಿದರೂ ಸಹ ಹಾರಿಕೆ ಉತ್ತರ ನೀಡಿ ಜಾರಿಕೊಳ್ಳುತ್ತಿದ್ದಾರೆ. ಆದರೆ ಪ್ರಜ್ವಲ್‌ಗೆ ಗೂಗಲ್ ಪೇ ಮೂಲಕ ಹಣ ವರ್ಗಾವಣೆಯಾಗಿರುವ ಬಗ್ಗೆ ಬ್ಯಾಂಕ್‌ಗಳಿಂದ ದಾಖಲೆ ಸಮೇತ ಮಾಹಿತಿ ಸಂಗ್ರಹಿಸಲಾಗಿದೆ.

ಇದನ್ನೂ ಓದಿ: ಇಂದು ಸಂಜೆ 7.15ಕ್ಕೆ ಮೋದಿ ಪದಗ್ರಹಣ: ಮಹಾತ್ಮ ಗಾಂಧಿ ಸ್ಮಾರಕಕ್ಕೆ ನಮನ

ಈ ಮಾಹಿತಿ ಆಧರಿಸಿಯೇ ಅವರ ತನಿಖೆ ನಡೆದಿದೆ. ಹಲವು ದಿನಗಳಿಂದ ಬೆಂಗಳೂರಿನ ಯುವತಿ ಜತೆ ಪ್ರಜ್ವಲ್‌ಗೆ ಸ್ನೇಹವಿದೆ. ಜರ್ಮನ್ ದೇಶದಲ್ಲಿ ಆಕೆಯ ಸ್ನೇಹಿತರು ಹಾಗೂ ಸೋದರ ಸಂಬಂಧಿಗಳು ನೆಲೆಸಿದ್ದಾರೆ. ಹೀಗಾಗಿ ಪ್ರಜ್ವಲ್‌ ವಿದೇಶದಲ್ಲಿದ್ದಾಗ ತನ್ನ ಸ್ನೇಹಿತರ ಮೂಲಕ ಆಕೆ ಸಹಾಯ ಮಾಡಿದ್ದಾಳೆ ಎಂಬ ಮಾಹಿತಿ ಸಿಕ್ಕಿದೆ. ಆ ಗೆಳತಿಯ ವಿಚಾರಣೆ ಬಳಿಕ ಹಣ ವರ್ಗಾವಣೆ ಕುರಿತು ಸ್ಪಷ್ಟ ಚಿತ್ರಣ ಸಿಗಲಿದೆ.

RELATED ARTICLES

Related Articles

TRENDING ARTICLES