Sunday, September 8, 2024

ಕುಮಾರಸ್ವಾಮಿ ಕೇಂದ್ರ ಮಂತ್ರಿಯಾಗಿ ಪ್ರಮಾಣವಚನ: 101 ತೆಂಗಿನಕಾಯಿ ಒಡೆದು ಹರಕೆ ತೀರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಕೇಂದ್ರದಲ್ಲಿ ಮೊಟ್ಟ ಮೊದಲ ಬಾರಿಗೆ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಘಾಟಿ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದು ದೇವರಲ್ಲಿ ಹರಕೆ ತೀರಿಸಿದರು.

ಘಾಟಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದೆ ನಡೆದ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರದಲ್ಲಿ ಮಂತ್ರಿಯಾಗಿ ಅಯ್ಕೆಯಾದರೆ ಸುಬ್ರಹ್ಮಣ್ಯ ದೇವರಿಗೆ 101 ತೆಂಗಿನಕಾಯಿ ಒಡೆಯುವುದಾಗಿ ಹರಕೆ ಮಾಡಿಕೊಂಡಿದ್ದ ಅಭಿಮಾನಿಗಳು, ಸೋಮವಾರ ಬೆಳಗ್ಗೆ ದೇವಾಲಯದ ಮುಂಭಾಗದಲ್ಲಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಶ್ರೀ ಅಪ್ಪಯ್ಯಣ್ಣನವರ ನೇತೃತ್ವದಲ್ಲಿ , ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ನೂರೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು.

ಇದನ್ನೂ ಓದಿ: ದೊಡ್ಮನೆಯಲ್ಲಿ ಡಿವೋರ್ಸ್​ ಬಿರುಗಾಳಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ ಯುವರಾಜ್​ ಕುಮಾರ್​

ಈ ವೇಳೆ ಮಾಜಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಪ್ಪಯ್ಯಣ್ಣನವರು ಮಾತನಾಡಿ ಕೇಂದ್ರದಲ್ಲಿ NDA ಸರ್ಕಾರ ಬಂದಿರುವುದು ಹಾಗೂ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿರುವುದರ ಜೊತೆಗೆ ನಮ್ಮ ನಾಯಕರಾದ ಕುಮಾರಸ್ವಾಮಿಯವರು ಕೇಂದ್ರದಲ್ಲಿ ಮಂತ್ರಿ ಆಗಿರುವುದು ನಮಗೆ ಬಹಳ ಸಂತೋಷವಾಗಿದೆ ಎಂದರು.

ಈ ಸಂದರ್ಭದಲ್ಲಿ ಹಳ್ಳಿ ರೈತ ಅಂಬರೀಷ್, ಜೆಡಿಎಸ್ ಯುವ ಮುಖಂಡ ಉದಯ್ ಆರಾಧ್ಯ, ಶ್ರೀಧರ್ ಹಾಗೂ ಕುಮಾರಸ್ವಾಮಿ ಅಭಿಮಾನಿಗಳು ಹಾಜರಿದ್ದರು.

RELATED ARTICLES

Related Articles

TRENDING ARTICLES