Saturday, June 29, 2024

ನಟ ದರ್ಶನ್​ ಬಂಧನ: ನಗರ ಪೊಲೀಸ್​ ಆಯುಕ್ತ ದಯಾನಂದ್​ ಪ್ರತಿಕ್ರಿಯೆ

ಬೆಂಗಳೂರು: ನಟ ದರ್ಶನ್​ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್​ ಆಯುಕ್ತರಾದ ಬಿ. ದಯಾನಂದ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ನಗರದ ಕಚೇರಿಯಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಮಾಕ್ಷಿಪಾಳ್ಯದಲ್ಲಿ ಜೂನ್​ 9ರಂದು ಭಾನುವಾರ ಸಿಕ್ಕ ಅಪರಿಚಿತ ವ್ಯಕ್ತಿಯ ಶವದ ಆಧಾರದ ಮೇಲೆ ಕಾಮಾಳ್ಷಿಪಾಳ್ಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅಲ್ಲಿನ ಸಿಸಿಟಿವಿ, ತಾಂತ್ರಿಕ ಸಾಕ್ಷಿಯ ಆಧಾರದ ಮೇಲೆ ಕೊಲೆಯಾದ ವ್ಯಕ್ತಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಬಂಧನ!

ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿ ಚಲನ ಚಿತ್ರ ನಟ ದರ್ಶನ್​ ಹಾಗು ಆತನ ಸಹಚರರನ್ನು ಬಂಧನಮಾಡಲಾಗಿದೆ. ಇಂದು ಸಂಜೆ ವೇಳೆಗೆ ನಟ ದರ್ಶನ್ ಹಾಗೂ ಸಹಚರರನ್ನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು  ಹಾಜರುಪಡಿಸಲಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಒಳಸಂಚಿನ ಆರೋಪದಲ್ಲಿ ಪವಿತ್ರಾ ಗೌಡ ಎಂಬುವವರನ್ನು ಬಂಧನ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES