Tuesday, June 18, 2024

ಭವಾನಿ ರೇವಣ್ಣ ಬಂಧಿಸಲು ಅನುಮತಿ ಕೊಡಿ: SIT

ಬೆಂಗಳೂರು: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಭವಾನಿ ಅವರ ನಿರೀಕ್ಷಣಾ ಜಾಮಿನು ಕುರಿತು ಸುದೀರ್ಘ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಪೀಠ ತೀರ್ಪು ಕಾಯ್ದಿರಿಸಿತು. ಅಲ್ಲದೆ, ಅರ್ಜಿಯ ತೀರ್ಪು ಪ್ರಕಟಿಸುವವರೆಗೂ ಭವಾನಿ ರೇವಣ್ಣ ಅವರನ್ನು ಬಂಧಿಸಬಾರದು ಎಂದು ಸೂಚಿಸಿ ಜೂ.7ರಂದು ಹೊರಡಿಸಿದ ಮಧ್ಯಂತರ ಅದೇಶವನ್ನು ವಿಸ್ತರಿಸಿ ಆದೇಶಿಸಿತು.

ಇದನ್ನೂ ಓದಿ: ಆರೋಪಿ ಮಗನ ಅರೆಸ್ಟ್‌ ಸುದ್ದಿ ಕೇಳಿ ತಂದೆ ಸಾವು: ನಟ ದರ್ಶನ್​​ಗೆ ಮರಣದಂಡನೆ ವಿಧಿಸುವಂತೆ ಒತ್ತಾಯ

ಇನ್ನೂ ಭವಾನಿ ಮೂರು ದಿನ ತನಿಖೆಗೆ ಹಾಜರಾಗಿದ್ದಾರೆ. ತನಿಖಾಧಿಕಾರಿ ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಸುಳ್ಳು ಉತ್ತರ ನೀಡುತ್ತಾರೆ. ಆ ಮೂಲಕ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಮೊಬೈಲ್‌ ವಶಕ್ಕೆ ನೀಡಬೇಕೆಂಬ ತನಿಖಾಧಿಕಾರಿಯ ಸೂಚನೆ ಪಾಲಿಸುತ್ತಿಲ್ಲ. ಹಾಗಾಗಿ ಅವರನ್ನು ಬಂಧಿಸಿಯೇ ವಿಚಾರಣೆಗೊಳಪಡಿಸಬೇಕಿದೆ ಎಂದು SIT ಅಧಿಕಾರಿಗಳು ಕೋರ್ಟ್‌ ಮೊರೆ ಹೋಗಲಿದ್ದಾರೆ.

RELATED ARTICLES

Related Articles

TRENDING ARTICLES