Sunday, June 23, 2024

ರಾಜ್ಯದಲ್ಲಿ ವಾಹನ ಸವಾರರಿಗೆ ಶಾಕ್!: ಪೆಟ್ರೋಲ್​, ಡೀಸೆಲ್​ ಬೆಲೆ ಹೆಚ್ಚಳ

ಬೆಂಗಳೂರು: ಜನತೆಗೆ ಮತ್ತೆ ಬೆಲೆ ಏರಿಕೆ ಶಾಕ್ ನೀಡಿದ ರಾಜ್ಯ ಸರ್ಕಾರ ಇಂದಿನಿಂದ ಪೆಟ್ರೋಲ್​ ಮತ್ತು ಡೀಸೆಲ್ ಬೆಲೆ ಏರಿಸಿ ವಾಹನ ಸವಾರರ ಜೇಬಿಗೆ ಹೊರೆ ಹೆಚ್ಚಿಸಿದೆ.

ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಲಿದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ. ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಶನಿವಾರ ಪ್ರಕಟಿಸಿದೆ.

ಇದನ್ನೂ ಓದಿ: ಕೇ‘ಡಿ’ ಗ್ಯಾಂಗ್ ಗೆ​ ಮತ್ತೆ ಸಂಕಷ್ಟ: ಪೊಲೀಸ್​ ಕಸ್ಟಡಿಗೆ ನೀಡಿ ಕೋರ್ಟ್​ ಆದೇಶ

ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ‌ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚಳವಾಗಲಿದೆ.

ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಶನಿವಾರ (ಜೂನ್ 15) ಮಧ್ಯಾಹ್ನ ಹೊರಡಿಸಿರುವ ಸುತ್ತೋಲೆಯಲ್ಲಿ ಸರ್ಕಾರ ಉಲ್ಲೇಖಿಸಿದೆ.

RELATED ARTICLES

Related Articles

TRENDING ARTICLES