Wednesday, June 26, 2024

ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ: ಸರ್ಕಾರದ ವಿರುದ್ದ ನಾಳೆ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್​ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ಪಕ್ಷವು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ನಾಳೆ ರಾಜ್ಯದ್ಯಂತ  ಪ್ರತಿಭಟನೆ ನಡೆಸಲು ಸಿದ್ದತೆ ಮಾಡಿಕೊಂಡಿದೆ.

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಪ್ರಕಟಿಸಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಹೆಚ್ಚಳ ಮಾಡಲಾಗಿದ್ದು, ಇಂಧನ ದರ ರಾಜ್ಯದಲ್ಲಿ ದುಬಾರಿಯಾಗಲಿದೆ. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗುವ ಸಾಧ್ಯತೆ ಇದೆ. ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ.

ಇದನ್ನೂ ಓದಿ: ದರ್ಶನ್ ಡಿಪ್ರೆಷನ್​​ಗೆ ಹೋಗಿದ್ದಾರೆ :ವಕೀಲ ಅನಿಲ್ ಬಾಬು

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ದರವನ್ನು ಹೆಚ್ಚಳ ಮಾಡುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಶನಿವಾರ ಪ್ರಕಟಿಸಿದೆ. ತೆರಿಗೆ ದರ ಹೆಚ್ಚಳದ ಕಾರಣ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆಯನ್ನು 3.50 ರೂಪಾಯಿ ಹೆಚ್ಚಳ‌ವಾಗಲಿದೆ.

ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ. ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ‌ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚಳವಾಗಲಿದೆ.

ಕಿವಿಗೆ ಹೂ.. ಕೈಯಲ್ಲಿ ಚೊಂಬು ಪ್ರೊಟೆಸ್ಟ್​​:

ಕಾಂಗ್ರೆಸ್ ಸರ್ಕಾರ ರಾಜ್ಯದ ವಾಹನ ಸವಾರರಿಗೆ ಬಿಗ್ ಶಾಕ್ ಕೊಟ್ಟಿದೆ. ಒಂದ್ಕಡೆ ಗ್ಯಾರಂಟಿ ಕೊಟ್ಟಿದ್ದೇವೆ ಅಂತಾ ಹೇಳೋ ಸರ್ಕಾರ, ಮತ್ತೊಂದ್ಕಡೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಸಿ ಸಾರ್ವಜನಿಕರಿಗೆ ಬರೆ ಎಳೆದಿದೆ. ಪೆಟ್ರೋಲ್ ಮೇಲೆ 3 ರೂಪಾಯಿ, ಡಿಸೇಲ್ ಬೆಲೆಯಲ್ಲಿ ಮೂರುವರೆ ರೂಪಾಯಿ ಏರಿಕೆ ಮಾಡಿದೆ. ಸರ್ಕಾರದ ಈ ನಡೆಗೆ ಸಾರ್ವಜನಿಕರು ಆಕ್ರೋಶ ಹೊರಹಾಕ್ತಿದ್ದಾರೆ. ಹೀಗೆ ತೈಲ ಬೆಲೆ ಏರಿಸಿದ್ರೆ ಬಡವರು ಏನು ಮಾಡಬೇಕು ಎಂದು ಕಿಡಿಕಾರಿದ್ದಾರೆ. ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ಕಿವಿಯಲ್ಲಿ ದಾಸವಾಳ. ಕೈಯಲ್ಲಿ ತೆಂಗಿನ ಚಿಪ್ಪು. ಬಾಯಲ್ಲಿ ಲೂಟಿ ಲೂಟಿ ಅನ್ನೋ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES