Monday, June 24, 2024

ಪವಿತ್ರಾಗೌಡ ನಿವಾಸದಲ್ಲಿ ಪೊಲೀಸರಿಂದ ಸ್ಥಳ ಮಹಜರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾ ಗೌಡ ಅವರ RR ನಗರದ ನಿವಾಸಕ್ಕೆ ಆರೋಪಿ ಪವಿತ್ರಾಗೌಡರನ್ನು ಕರೆತಂದ ಪೊಲೀಸರು ಸ್ಥಳಮಹಜರು ಮಾಡುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆಗೂ ಮುನ್ನ ಪವಿತ್ರಾಗೌಡ ರೇಣುಕಾ ಕೆನ್ನೆಗೆ ಚಪ್ಪಲಿಯಿಂದ ಬಾರಿಸಿದ್ದರು ಎನ್ನುವ ಮಾಹಿತಿ ಬಹಿರಂಗವಾಗವಾದ ಬೆನ್ನಲ್ಲೇ ಆರ್​ಆರ್​ ನಗರದಲ್ಲಿರುವ ಪವಿತ್ರಾಗೌಡ ನಿವಾಸಕ್ಕೆ ಆಗಮಿಸಿರುವ ಪೊಲೀಸರು ಕೃತ್ಯಕ್ಕೆ ಬಳಸಿದ ಚಪ್ಪಲಿ, ಬಟ್ಟೆ ಸೇರಿದಂತೆ ಮಹತ್ವದ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ.

ಇದನ್ನೂ ಓದಿ: ದರ್ಶನ್ ಡಿಪ್ರೆಷನ್​​ಗೆ ಹೋಗಿದ್ದಾರೆ :ವಕೀಲ ಅನಿಲ್ ಬಾಬು

ಪವಿತ್ರಾ ಗೌಡ ಮ್ಯಾನೇಜರ್ ಅರೆಸ್ಟ್‌:

ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೇ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ 16ಜನ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬನನ್ನು  ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ಅಂದರೆ ರೇಣುಕಾಸ್ವಾಮಿ ಕೊಲೆಯಾದ ಶೆಡ್‌ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್‌ನನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES