Wednesday, June 26, 2024

ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುವಾಗ ಸಂಭ್ರಮಾಚರಣೆ ಸರಿಯಲ್ಲ: ರಕ್ಷಕ್​ ಬುಲ್ಲೆಟ್​

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಪೊಲೀಸರ ವಶದಲ್ಲಿದ್ದೂ ವಿಚಾರಣೆ ಎದುರಿಸುತ್ತಿದ್ದಾರೆ. ಈ ಕುರಿತು ನಟ ಸುದೀಪ್​ ಹಾಗು ಉಪೇಂದ್ರ ಪ್ರತಿಕ್ರಿಯಿಸಿದ ಬೆನ್ನಲ್ಲೇ ಬಿಗ್​ ಬಾಸ್​ ಸ್ಪರ್ಧಿ, ಕನ್ನಡದ ಖ್ಯಾತ ಹಾಸ್ಯ ನಟ ಬುಲ್ಲೆಟ್​ ಪ್ರಕಾಶ್​ ಪುತ್ರ ರಕ್ಷಕ್​ ಬುಲ್ಲೆಟ್  ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಂಚಿಕೊಂಡಿರುವ ಅವರು, ಎಲ್ಲರಿಗೂ ನಮಸ್ಕಾರ ಹಾಗೂ ಫಾದರ್ಸ್ ಡೇ ಶುಭಾಶಯಗಳು. ಇವತ್ತು ಬೆಳಗ್ಗೆಯಿಂದ ನನ್ನ ತಂದೆಯ ನೆನಪು ನನ್ನನ್ನು ತುಂಬಾ ಕಾಡುತ್ತಿದೆ. ಎಲ್ಲರಂತೆ ನನಗೂ ಕೂಡ ನನ್ನ ತಂದೆಯೇ ಮೊದಲ ಹೀರೋ. ಹೀರೋ ಅಷ್ಟೇ ಅಲ್ಲ ಒಳ್ಳೆಯ ಮಾರ್ಗದರ್ಶಕರು ಹಾಗೂ ಸ್ನೇಹಿತರು ಕೂಡ ಆಗಿದ್ದರು. ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ’ ಎಂದು ಪೋಸ್ಟ್ ಆರಂಭಿಸಿದ್ದಾರೆ ರಕ್ಷಕ್.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಬಂಧನ, ತಮ್ಮ ಸ್ಟೈಲಲ್ಲೇ ಉಪ್ಪಿ ರಿಯಾಕ್ಷನ್!

‘ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ. ಮುಂದಿನ ವರ್ಷದ ಹುಟ್ಟು ಹಬ್ಬದಷ್ಟರಲ್ಲಿ ಏನಾದರೂ ಒಂದು ಸಾಧನೆ ಮಾಡಿರುತ್ತೇನೆ, ಆಗ ನನ್ನ ಎಲ್ಲ ಸ್ನೇಹಿತರು, ಹಿತೈಷಿಗಳು, ಗುರು-ಹಿರಿಯರು ಹಾಗೂ ಪ್ರೀತಿ ಪಾತ್ರರೊಂದಿಗೆ ಆಚರಣೆ ಮಾಡುತ್ತೇನೆ. ಹೀಗೆ ನಿಮ್ಮ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದ ನನ್ನ ಮೇಲಿರಲಿ ನನ್ನನ್ನು ಬೆಂಬಲಿಸುತ್ತಿರುವ ಎಲ್ಲ ನನ್ನ ಸ್ನೇಹಿತರು, ಪ್ರೀತಿ ಪಾತ್ರರು, ಮಾಧ್ಯಮ ಮಿತ್ರರು, ಟ್ರೋಲ್ ಪೇಜ್‌ಗಳು, ಯೂಟ್ಯೂಬ್‌ರ್ಸ್‌ ಹಾಗೂ ಎಲ್ಲಾ ಸಾಮಾಜಿಕ ಜಾಲತಾಣದ ಸ್ನೇಹಿತರಿಗೆ ಧನ್ಯವಾದಗಳು’ ಎಂದು ಬರೆದಿದ್ದಾರೆ ಅವರು.

RELATED ARTICLES

Related Articles

TRENDING ARTICLES