Wednesday, June 26, 2024

30 ನಿಮಿಷಗಳ ವೀಡಿಯೋ ಆಧರಿಸಿ ದರ್ಶನ್​ ಅಂಡ್ ಗ್ಯಾಂಗ್ ಬಂಧನ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಮತ್ತು ಪವಿತ್ರಾ ಗೌಡರನ್ನು ಪೊಲೀಸರು ವಿಡಿಯೋವನ್ನು ಆಧಾರಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿದ ಬಳಿಕ ಬೆಂಗಳೂರಿನ ಆರ್‌ಆರ್‌ ನಗರದಲ್ಲಿರುವ ಪಟ್ಟಣಗೆರೆ ಕಾರ್​ ಶೆಡ್‌ಗೆ ಕರೆ ತಂದಿದ್ದರು. ಈ ಶೆಡ್‌ನಲ್ಲಿ ದರ್ಶನ್‌ ಗ್ಯಾಂಗ್‌ ಹಲ್ಲೆ ನಡೆಸಿ ಹತ್ಯೆ ನಡೆಸಿತ್ತು. ದರ್ಶನ್‌ ಗ್ಯಾಂಗ್‌ ಹಲ್ಲೆ ನಡೆಸುತ್ತಿರುವ ದೃಶ್ಯ ಶೆಡ್‌ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ದರ್ಶನ್‌ ಮತ್ತು ಪವಿತ್ರಾ ಗೌಡ ಇಬ್ಬರು ಸೇರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ:ಕಿಡ್ನಾಪ್​ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು 

ಪ್ರಕರಣ ಬೆಳಕಿಗೆ ಬಂದಾಗ ಆರೋಪಿಗಳ ಹೇಳಿಕೆ ನೀಡಿ ಪೊಲೀಸರು ದರ್ಶನ್‌ ಅವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಪೊಲೀಸರು ಸಿಸಿಟಿವಿ ದೃಶ್ಯವನ್ನು ಆಧಾರಿಸಿ ಬಂಧಿಸಿದ್ದಾರೆ ಎಂಬ ವಿಚಾರ ಈಗ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ. ಇಬ್ಬರೂ ಒಟ್ಟೊಟ್ಟಿಗೆ ಬಂದು ಹೋಗಿರುವ ದೃಶ್ಯಗಳು ಸೆರೆಯಾಗಿದೆ. ಸದ್ಯ ಪೊಲೀಸರ ಬಳಿಕ 30 ನಿಮಿಷದ ವಿಡಿಯೋವಿದ್ದು ಇದೇ ಪ್ರಕರಣಕ್ಕೆ ಪ್ರಮುಖ ಸಾಕ್ಷಿಯಾಗಲಿದೆ. ಸಿಸಿಟಿವಿ ವಿಚಾರವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದ ಬಳಿಕ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES

Related Articles

TRENDING ARTICLES