Friday, July 12, 2024

ಪ್ರಜ್ವಲ್​ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ: ಕೋರ್ಟ್​ ಆದೇಶ

ಹಾಸನ: ರಾಸಲೀಲೆ ವೀಡಿಯೋಗಳ ಪೆನ್​ಡ್ರೈವ್​ ಪ್ರಕರಣದ ಪ್ರಮುಖ ರೂವಾರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಂಗ​ ಬಂಧನ ಹಿನ್ನೆಲೆಯಲ್ಲಿ ಪ್ರಜ್ವಲ್​ ರೇವಣ್ಣ ಅವರನ್ನು ಪೊಲೀಸರು ಬೆಂಗಳೂರು ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯದಿದ್ದಾರೆ.

ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ SIT ಅಧಿಕಾರಿಗಳು ಇಂದು (ಜೂ.18) ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ: ಕಿಡ್ನಾಪ್​ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

ನ್ಯಾಯಾಲಯದ ವಿಚಾರಣೆ ವೇಳೆ ನ್ಯಾಯಾದೀಶರ ಎದುರು ಪ್ರಜ್ವಲ್​ ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ನಾನು ಎರಡು ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳುತ್ತಾರೆ. ಇದು ತುಂಬಾ ಮುಜುಗರ ಆಗತ್ತೆ ಎಂದು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಎರಡು ಪ್ರಕರಣದಲ್ಲಿ ಸೇಮ್ ಪರೀಕ್ಷೆ ಆಗಿದೆ. ಇದನ್ನ ಪರಿಶೀಲನೆ ಮಾಡುತ್ತೇನೆ ಎಂದು ನ್ಯಾಯಾದೀಶರು ಹೇಳಿದ್ದಾರೆ.

ಎಸ್​ಐಟಿ ಅಧಿಕಾರಿಗಳು ಇಲ್ಲಿಯವರೆಗು ಹೊಳೆನರಸೀಪುರ, ಕೆ.ಆರ್.ನಗರ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದು, ಇದೀಗ ಮತ್ತೊಂದು ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು ಕಸ್ಟಡಿ ಪಡೆಯಲು ಸಿದ್ದತೆ ನಡೆಸಿದ್ದಾರೆ.

ಹೊಳೆನರಸೀಪುರ ಪೊಲೀಸ್​ ಠಾಣೆಯಲ್ಲಿ ದಾಖಲಾದ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನ್ಯಾಯಾಲಯ ನೋಟಿಸ್ ನೀಡಿದೆ.

RELATED ARTICLES

Related Articles

TRENDING ARTICLES