Wednesday, June 26, 2024

ಕಿಡ್ನಾಪ್​ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಕೆ.ಆರ್​ ನಗರದ ನಿವಾಸಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

ಭವಾನಿ ರೇವಣ್ಣ ಅವರು ಮೈಸೂರು, ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪೊಲೀಸರ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಅವರು ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಅಕ್ಕ (ಭವಾನಿ ರೇವಣ್ಣ) ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾ. ಕೃಷ್ಣ ಎಸ್​ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಹೇಳಿತು.

ಇದನ್ನೂ ಓದಿ: ದರ್ಶನ್ ಇಟ್ಕೊಂಡವ್ಳಿಗೆ ಕೋಟಿ ಮನೆ.. ಒಡಹುಟ್ಟಿದವನಿಗೆ ಬಾಡಿಗೆ ಮನೆ..!!?

ಪ್ರಜ್ವಲ್​ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಹೆಚ್​ಡಿ ರೇವಣ್ಣ, ಭವಾನಿ ರೇವಣ್ಣ ಮತ್ತು ಭವಾನಿ ರೇವಣ್ಣ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು.

RELATED ARTICLES

Related Articles

TRENDING ARTICLES