Saturday, July 13, 2024

ನನ್ನ ಗುರು ದರ್ಶನ್​ ಕೊಲೆ ಪ್ರಕರಣದಲ್ಲಿ ಭಾಗಿಯಗಿದ್ದಾರೆಂದರೇ ನಂಬೋಕೆ ಆಗ್ತಿಲ್ಲ: ರಚಿತಾ ರಾಮ್​

ಬೆಂಗಳೂರು: ನಟ ದರ್ಶನ್​ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್​ ವಿಚಾರಣೆ ಎದುರಿಸುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಈಗಾಗಲೇ ಕನ್ನಡ ಚಿತ್ರರಂಗದ ಹಿರಿಯ ನಟ, ನಟಿಯರು ಪ್ರತಿಕ್ರಿಯೆ ನೀಡಿದ ಬೆನ್ನಲ್ಲೇ ನಟಿ ರಚಿತ ರಾಮ್​ ಕೂಡ ದರ್ಶನ್​ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್‌ ಅವರ ʼಬುಲ್‌ಬುಲ್‌ʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ರಚಿತಾ ರಾಮ್‌ ತಮ್ಮ ಎಕ್ಸ್​ ಖಾತೆಯಲ್ಲಿ ಘಟನೆ ಬಗ್ಗೆ ಪೋಸ್ಟ್​ ಹಂಚಿಕೊಂಡಿದ್ದು ತಮ್ಮ ಆಘಾತ ವ್ಯಕ್ತಪಡಿಸಿದ್ದಾರೆ.

ಈ ಪೋಸ್ಟ್​ನಲ್ಲಿ, ʼʼಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು. ಮೊದಲನೆಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಭವಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆʼʼ ಎಂದು ಹೇಳಿದ್ದಾರೆ.
ಮುಂದುವರಿದು, ʼʼನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್‌ ಸರ್‌ ನನಗೆ ಗುರು ಸಮಾನರು. ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತಿದೆ.
ಏನಿದ್ದರೂ ಸತ್ಯ ಪೊಲೀಸ್‌ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ. ನನ್ನ ಮಾಧ್ಯಮ ಮಿತ್ರರು ಈ ಕೇಸ್‌ನ ವರದಿಯಲ್ಲಿ ಪಾರದರ್ಶಕವಾಗಿರುತ್ತೀರಿ ಮತ್ತು ನಿಷ್ಪಕ್ಷವಾಗಿ ಕೆಲಸ ಮಾಡುತ್ತೀರಿ ಎಂದು ಆಶಿಸುತ್ತೇನೆʼʼ ಎಂದು ರಚಿತಾ ರಾಮ್‌ ಬರೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES