Wednesday, June 26, 2024

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸ್ವಲ್ಪ ಎಚ್ಚರ ತಪ್ಪಿದ್ದರೂ ತನಿಖೆ ದಾರಿ ತಪ್ಪುತ್ತಿತ್ತು-ಬಿ ದಯಾನಂದ್​

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಸಹಚರರನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಈ ಕೊಲೆ ಪ್ರಕರಣದಲ್ಲಿ ನಾವು ಸ್ವಲ್ಪ ನಿರ್ಲಕ್ಷಿಸಿದ್ದರೂ ಪ್ರಕರಣ ಬೇರೆಯದೇ ದಾರಿ ಹಿಡಿಯುತ್ತಿತ್ತು ಎಂದು ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್​ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಕರಣದ ಗಂಭಿರತೆಯಿಂದ ಕೂಡಿರುವುದರಿಂದ ಎಸಿಪಿಗೆ ತನಿಖಾ ಹೊಣೆ ನೀಡಲಾಗಿದೆ. ಅಗತ್ಯ ಸಿಬ್ಬಂದಿಗಳನ್ನು ಒದಗಿಸಲಾಗಿದೆ. ಬೆಂಗಳೂರು, ಚಿತ್ರದುರ್ಗ ಸೇರಿದಂತೆ ಹಲವು ಕಡೆ ತಂಡಗಳಿಂದ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಕಿಡ್ನಾಪ್​ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು

ಇನ್ಸ್ಪೆಕ್ಟರ್​ಗಳು ತಂಡದಲ್ಲಿ ತನಿಖೆ ನಡೆಸುತಿದ್ದಾರೆ. ಸಮರ್ಪಕ ಹಾಗೂ ವಿಧಿವಿಜ್ಞಾನ, ತಾಂತ್ರಿಕ, ಕಾನೂನು ಸಲಹೆ ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇವೇ ವೇಳೆ ನಗರದ ವಿವಿದೆಡೆಗಳಲ್ಲಿ ನಡೆದ ಆರೋಪಗಳ ಮಾಹಿತಿ ನೀಡಿದ ಅವರು, ಕಿಡ್ನಾಪ್ ಮಾಡಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ಮೂಲದ ಇಬ್ಬರು ಬೈಕ್​ನಲ್ಲಿ ತೆರಳುವಾಗ ಅವರನ್ನು ಅಪಹರಿಸಲಾಗಿತ್ತು. ಬಳಿಕ ಅವರಿಂದ ಮೊಬೈಲ್, ಹಣ ಸುಲಿಗೆ ಮಾಡಲಾಗಿತ್ತು. ದೂರು ಬಂದ ಬಳಿಕ ತನಿಖೆ ಮಾಡಿ ಆರೋಪಿಗಳನ್ನು ಬಂಧಿಸಲಾಗಿದೆ. ಕಳುವಾಗಿದ್ದ ಹಣ, ಬೈಕ್​ ಅನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಹೆಣ್ಣೂರು ಪೊಲೀಸರು ಮೊಬೈಲ್ ಕಳ್ಳರನ್ನು ಬಂಧಿಸಿದ್ದಾರೆ. ನಸುಕಿನ ಜಾವ 4 ಗಂಟೆ ಸುಮಾರಿಗೆ ಹೋಟೆಲ್ ಒಂದರ ಬಳಿ ಚಾಕು ತೋರಿಸಿ ಮೊಬೈಲ್​ ಕಳವು ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ ಕಳುವಾದ ಮೊಬೈಲ್​ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಬಾಣಸವಾಡಿ ಪೊಲೀಸರು ಹೋಟೆಲ್ ಮೇಲೆ ದಾಳಿ ಮಾಡಲಾಗಿದ್ದು, ಇಬ್ಬರು ವಿದೇಶಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಹೋಟೆಲ್​ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದರು.

RELATED ARTICLES

Related Articles

TRENDING ARTICLES