Friday, September 20, 2024

HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15ರವರೆಗೆ ವಿಸ್ತರಣೆ

ಬೆಂಗಳೂರು: 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು ಆಳವಡಿಸುವ ಅವಧಿಯನ್ನು ರಾಜ್ಯ ಸರ್ಕಾರವು ಸೆಪ್ಟೆಂಬರ್ 15, 2024ರವರೆಗೆ ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ.

ವಾಹನ ಮಾಲೀಕರಿಂದ ಸೂಕ್ತ ಸ್ಪಂದನೆ ದೊರಕದಿರುವ ಹಿನ್ನೆಲೆಯಲ್ಲಿ ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಆಳವಡಿಸುವ ಅವಧಿಯನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಿಸಲಾಗಿದೆ. 2019ರ ಏಪ್ರಿಲ್ ನಂತರದ ವಾಹನಗಳ ನೋಂದಣಿ ಮಾಡಿಕೊಳ್ಳುವಾಗಲೇ ಎಚ್‌ಎಸ್‌ಆರ್‌ಪಿ ಅಳವಡಿಸಲಾಗಿರುತ್ತದೆ. ಅದಕ್ಕಿಂತ ಹಿಂದೆ ನೋಂದಣಿಯಾಗಿರುವ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಆಳವಡಿಸಬೇಕಿದೆ. ಈ ಹಿಂದೆಯೂ ಗಡುವು ಹಲವು ಬಾರಿ ವಿಸ್ತರಿಸಲಾಗಿತ್ತು.

ಇದನ್ನೂ ಓದಿ: ವಾಹನಗಳಿಗೆ LED ಲೈಟ್​ ಅಳವಡಿಕೆ: ವಾಹನ ಮಾಲೀಕರ ಮೇಲೆ ಕೇಸ್​ ದಾಖಲು: ಅಲೋಕ್​ ಕುಮಾರ್​

ಸೆ.15ರ ಬಳಿಕ ವಿಸ್ತರಣೆ ಇಲ್ಲ:

ಎಚ್​ಎಸ್​ಆರ್​ಪಿ ನಂಬರ್ ಪ್ಲೇಟ್ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರತಿಕ್ರಯಿಸಿ, “ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಕಾಲಾವಕಾಶ ನೀಡಲಾಗಿದೆ. ಸೆಪ್ಟೆಂಬರ್‌ 15ರ ಬಳಿಕ ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಗಡುವನ್ನು ವಿಸ್ತರಣೆ ಮಾಡುವುದಿಲ್ಲ” ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುನ್ನ ನೋಂದಣಿಯಾದ ಎಲ್ಲ ಮಾದರಿಯ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ, ವಿತರಣೆ, ಅಳವಡಿಕೆ ಸೇರಿದಂತೆ ನಾನಾ ಸಮಸ್ಯೆಗಳಿಂದ ಈ ಯೋಜನೆಗೆ ಸಮಸ್ಯೆಯಾಗುತ್ತಿದೆ. ಸುರಕ್ಷಿತ ನಂಬರ್​ ಪ್ಲೇಟ್ ಅಳವಡಿಸಲು ಸುಮಾರು ಅರ್ಧದಷ್ಟು ವಾಹನ ಮಾಲೀಕರಿಗೆ ಇನ್ನೂ ಆಗಿಲ್ಲ. ಹೀಗಾಗಿ ಗಡುವು ವಿಸ್ತರಣೆ ಆಗುತ್ತಲೇ ಇದೆ.

RELATED ARTICLES

Related Articles

TRENDING ARTICLES