Wednesday, July 3, 2024

ಎಣ್ಣೆ ಪ್ರಿಯರಿಗೆ ಸಿಹಿ ಸುದ್ದಿ: ಜುಲೈ 1ರಿಂದ ದುಬಾರಿ ಮದ್ಯ ಅಗ್ಗ

ಬೆಂಗಳೂರು: ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ.

ನೆರೆಹೊರೆಯ ರಾಜ್ಯಗಳಲ್ಲಿನ ಮದ್ಯದ ಬೆಲೆಗೆ ಅನುಗುಣವಾಗಿ ಕರ್ನಾಟಕದಲ್ಲೂ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಬ್ರಾಂಡ್‌ಗಳ ಮದ್ಯದ ಬೆಲೆಯನ್ನು ಪರಿಷ್ಕರಿಸುವುದಾಗಿ ಸರಕಾರ ಬಜೆಟ್‌ನಲ್ಲೇ ಘೋಷಿಸಿತ್ತು. ಈ ಘೋಷಣೆ ಈಗ ಜಾರಿಯಾಗುತ್ತಿದ್ದು, ಹೊರ ರಾಜ್ಯಗಳಲ್ಲಿನ ಮದ್ಯದ ದರಪಟ್ಟಿ ಆಧರಿಸಿ ಹೊಸದಾಗಿ ಬೆಲೆ ನಿಗದಿಪಡಿಸಲಾಗಿದೆ.

ರಾಜ್ಯ ಸರ್ಕಾರವು ವರಮಾನ ಸಂಗ್ರಹ ಹೆಚ್ಚಿಸಿಕೊಳ್ಳುವುದಕ್ಕಾಗಿ ಸತತವಾಗಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆ (ಎಇಡಿ) ಹೆಚ್ಚಿಸುತ್ತಾ ಬಂದಿತ್ತು. 2023ರ ಜುಲೈನಲ್ಲಿ ಭಾರತೀಯ ಉತ್ಪಾದಿತ ಮದ್ಯದ ಮೇಲಿನ ಎಇಡಿ ಹೆಚ್ಚಿಸಿದ್ದರೆ, 2024ರ ಜನವರಿಯಲ್ಲಿ ಬಿಯರ್ ಮೇಲಿನ ಎಇಡಿ ಹೆಚ್ಚಿಸಲಾಗಿತ್ತು. ಇದೇ ಮೊದಲ ಬಾರಿಗೆ ಎಇಡಿ ಕಡಿಮೆ ಮಾಡುವ ನಿರ್ಧಾರವನ್ನು ಕೈಗೊಂಡಿದೆ.

ಇದನ್ನೂ ಓದಿ: ‘ಕೇD’ ಗ್ಯಾಂಗ್​ಗೆ ಜೈಲಾ? ಪೊಲೀಸ್​​​ ಕಸ್ಟಡಿನಾ?: ದರ್ಶನ್‌ಗೆ ಸಪೋರ್ಟ್‌ ಮಾಡುವ ಪ್ರಮೇಯವೇ ಇಲ್ಲ: ಸಿಎಂ

ಹೆಚ್ಚುವರಿ ಅಬಕಾರಿ ತೆರಿಗೆ ಪ್ರಮಾಣ ರಾಜ್ಯದಲ್ಲಿ ಹೆಚ್ಚು ಇರುವ ಕಾರಣದಿಂದ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮದ್ಯದ ದರ ದುಬಾರಿಯಾಗಿದೆ. ಈ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ನೆರೆಯ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮವಾಗಿ ಮದ್ಯ ಪೂರೈಕೆಯಾಗುತ್ತಿದೆ. ಗಡಿ ಭಾಗದ ಜಿಲ್ಲೆಗಳ ಜನರು ನೆರೆಯ ರಾಜ್ಯಗಳಿಗೆ ಹೋಗಿ ಮದ್ಯ ಖರೀದಿಸುತ್ತಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಅಬಕಾರಿ ತೆರಿಗೆ ನಷ್ಟವಾಗುತ್ತಿದೆ. ಮದ್ಯ ಮಾರಾಟ ಹೆಚ್ಚಿಸಿ, ಅಬಕಾರಿ ತೆರಿಗೆ ಮೂಲದ ವರಮಾನವನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ದರ ಪರಿಷ್ಕರಣೆ ಮಾಡಲಾಗಿದೆ.

RELATED ARTICLES

Related Articles

TRENDING ARTICLES