Friday, July 12, 2024

ವಿಧಾನಸೌಧ ಮುಂಭಾಗ ವಿಶ್ವ ಯೋಗದಿನ ಆಚರಣೆ

ಬೆಂಗಳೂರು: 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ವಿಧಾನಸೌದ ಗ್ರಾಂಡ್ ಸ್ಟೆಪ್ ಮುಂಭಾಗದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಈ ಬಾರಿಯ ಯೋಗವನ್ನು ಸ್ವಂತ ಮತ್ತು ಸಾಮಾಜಿಕಕ್ಕಾಗಿ ಯೋಗ ‘ಘೋಷ ವಾಕ್ಯ’ದಡಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಯೋಗ ಕಾರ್ಯಕ್ರಮದಲ್ಲಿ‌ ಸಾವಿರಕ್ಕು ಹೆಚ್ಚು ಜನ ಭಾಗಿಯಾಗಿದ್ದಾರೆ. ಆಯುಷ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಇದನ್ನೂ ಓದಿ: International Yoga Day: ದಾಲ್‌ ಸರೋವರ ತೀರದಲ್ಲಿ ‘ನಮೋ’ ಯೋಗ!

ವಿಶ್ವ ಯೋಗದಿನ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ಯು.ಟಿ ಖಾದರ್, ನಟಿ ಅನುಪ್ರಭಾಕರ್​​, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

RELATED ARTICLES

Related Articles

TRENDING ARTICLES