Saturday, September 28, 2024

ಚನ್ನಪಟ್ಟಣದಿಂದ ಡಿಸಿಎಂ ಡಿಕೆ ಶಿವಕುಮಾರ್ ಸ್ಪರ್ಧೆ: ಹೆಚ್​ಡಿಕೆ ಕಿಡಿ

ಬೆಂಗಳೂರು: ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ  ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ರಾಜ್ಯ ಡಿಸಿಎಂ ಡಿಕೆ ಶಿವಕುಮಾರ್​ ಸ್ಪರ್ಧಿಸಲಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.

ದೆಹಲಿಯಲ್ಲಿ ವಿಶ್ವಯೋಗಾ ದಿನಾಚರಣೆ ಬಳಿಕ ಮಾದ್ಯಮ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದು, ಡಿಸಿಎಂ ಆಗಿ ಒಂದೂವರೆ ವರ್ಷದಿಂದ ಚನ್ನಪಟ್ಟಣಕ್ಕೆ ಹೋಗಿರಲಿಲ್ಲ. ಈಗ ಚನ್ನಪಟ್ಟಣದ ಬಗ್ಗೆ ಮಮತೆ ಬಂದಿದೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಪೊಲೀಸ್​ ಕಸ್ಟಡಿಯಲ್ಲಿರುವ ನಟ ದರ್ಶನ್ ತೂಕ ಹಾಗೂ ಬಿಪಿಯಲ್ಲಿ ವ್ಯತ್ಯಾಸ!

ಇಲ್ಲಿಯವರೆಗೆ ಚನ್ನಪಟ್ಟಣ ಅಭಿವೃದ್ಧಿ ಮಾಡಬೇಡಿ ಎಂದು ಡಿಕೆ ಶಿವಕುಮಾರ್​ರನ್ನು ತಡೆದಿದ್ದು ಯಾರು? ಸಂಸದರಾಗಿ ಡಿಕೆ ಶಿವಕುಮಾರ್​ ಸಹೋದರನ ಕೊಡುಗೆ ಏನು? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ಅಭ್ಯರ್ಥಿ ಆಗಬಹುದು. ನಮ್ಮ ಕಡೆಯಿಂದ ಅಭ್ಯರ್ಥಿ ಯಾರು ಎಂದು ಕಾಲ ನಿರ್ಧರಿಸುತ್ತದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಕರ್ನಾಟದಲ್ಲಿ ಕಾಂಗ್ರೆಸ್ ಕಡಿಮೆ ಸೀಟು ಬರಲು ಇವಿಎಂ ಕಾರಣ ಎಂಬ ಕಾಂಗ್ರೆಸ್ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದರು. ಕರ್ನಾಟಕದ ಲೋಕಸಭಾ ಫಲಿತಾಂಶಕ್ಕೆ ಇವಿಎಂ ಕಾರಣವಾದರೆ, 2023 ರ ವಿಧಾನಸಭೆ ವಿಧಾನ ಸಭೆಯಲ್ಲಿ ಕಾಂಗ್ರೆಸ್ 136 ಕ್ಷೇತ್ರಗೆದ್ದಿತ್ತಲ್ಲ, ಆಗ ಇವಿಎಂ ದೋಷವಿತ್ತಾ ಎಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಅವರು ಟಾಂಗ್ ನೀಡಿದರು.

RELATED ARTICLES

Related Articles

TRENDING ARTICLES