Saturday, September 28, 2024

International Yoga Day: ದಾಲ್‌ ಸರೋವರ ತೀರದಲ್ಲಿ ‘ನಮೋ’ ಯೋಗ!

ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಇಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತಿದೆ. ಈ ಬಾರಿಯ ಯೋಗ ದಿನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು-ಕಾಶ್ಮೀರದಲ್ಲಿ  ಆಚರಿಸಿದ್ದಾರೆ.

ಅಂತಾರಾಷ್ಟ್ರೀಯ ಯೋಗ ದಿನವನ್ನು ಗುರುತಿಸಲು ಮೋದಿಯವರ ಶ್ರೀನಗರವನ್ನು ಈ ಬಾರಿ ಆಯ್ಕೆ ಮಾಡಿಕೊಂಡಿದ್ದು ವಿಶೇಷ. ಶ್ರೀನಗರದ ದಾಲ್‌ ಸರೋವರದ ತೀರದಲ್ಲಿನ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಯೋಗ ಪ್ರದರ್ಶನ ನೀಡಿದರು. ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿ ಮೋದಿ ಅವರಿಗೆ ಸಾಥ್‌ ನೀಡಿದರು.

‘ಯೋಗ ಕೇವಲ ಜ್ಞಾನವಲ್ಲ, ವಿಜ್ಞಾನವೂ ಹೌದು’

ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶ್ರೀನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು ಮಾತನಾಡಿದರು, ಯೋಗದ ಪ್ರಯಾಣ ಮುಂದುವರೆಯುತ್ತಿದೆ, ಇಂದು ಜಗತ್ತಿನಲ್ಲಿ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿದೆ ಎಂದು ಹೇಳಿದ್ರು. ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು.

ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ: ದಾಸನಿಗೆ ‘139’ ಕಂಟಕ: ಶೆಡ್​​ ಕಾರ್ಮಿಕರ ಬಾಯಿ ಮುಚ್ಚಿಸಲು ಭಾರಿ ಆಮಿಷ

ಆರೋಗ್ಯವಂತರಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು: ಹೆಚ್‌ಡಿಕೆ

ನೋಯ್ಡಾದ ಬಿಹೆಚ್‌ಇಎಲ್‌ ಟೌನ್‌ಶಿಪ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನ  ಸಮಾರಂಭದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದರು. ಸ್ವತಃ ಯೋಗ ಮಾಡಿ ವಿಶೇಷ ದಿನವನ್ನು ಆಚರಿಸಿದರು.

ಕೇಂದ್ರ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಹೆಚ್‌ಡಿಕೆ ಭಾಗಿಯಾದರು. ಬಿಹೆಚ್ಇಎಲ್‌ನ ಸಿಬ್ಬಂದಿ ಮತ್ತು ಸ್ಥಳೀಯರು ಸಾಥ್‌ ನೀಡಿದರು. ಯೋಗ ದಿನದ ಕುರಿತು ಮಾತನಾಡಿದ ಹೆಚ್‌ಡಿಕೆ, 2014 ರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗವನ್ನು ಆಚರಿಸಲಾಗುತ್ತಿದೆ. ಮೈಸೂರಿನ ಅರಮನೆ ಮೈದಾನದಲ್ಲಿ ಮೋದಿ ಅವರು ಮೊದಲ ಬಾರಿಗೆ ಯೋಗ ಮಾಡಿದರು.

ಯೋಗಕ್ಕೆ ಪ್ರಧಾನಿಗಳ ಪ್ರೋತ್ಸಾಹ ಹೆಚ್ಚು ಪ್ರಚುರಪಡಿಸಿದೆ. ಕಾಯಿಲೆಗಳಿಗೆ ಯೋಗ ಸ್ವಲ್ಪ ಮುಕ್ತಿ ನೀಡುತ್ತದೆ. ಯೋಗಕ್ಕೆ ನಮ್ಮ‌ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ. ಆರೋಗ್ಯವಂತವಾಗಿರಲು ನಿತ್ಯ ಯೋಗ ಅಳವಡಿಸಿಕೊಳ್ಳಬೇಕು. ಕಾಶ್ಮೀರದಲ್ಲಿ ಮೋದಿ ಅವರು ಯೋಗ ಮಾಡುತ್ತಿದ್ದಾರೆ. ಇದು ಒಳ್ಳೆಯ ಸಂದೇಶ, ಪ್ರೇರಣೆ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES