Friday, June 28, 2024

ಸೂರಜ್​ ರೇವಣ್ಣ ಪ್ರಕರಣ: ತನಿಖಾಧಿಕಾರಿಯಾಗಿ ಬಿ.ಕೆ ಸಿಂಗ್​ ನೇಮಕ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ​ ಸೂರಜ್ ರೇವಣ್ಣ ಪ್ರಕರಣದ ತನಿಖೆಯ ಹೊಣೆಯನ್ನೂ ಎಡಿಜಿಪಿ ಬಿ.ಕೆ. ಸಿಂಗ್ ಹೆಗಲಿಗೆ ನೀಡಲಾಗಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯ ಹೊಣೆ ಹೊತ್ತಿರುವ ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ತಂಡಕ್ಕೆ ಸೂರಜ್ ರೇವಣ್ಣ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನೀಡಿದೆ.

ಇದನ್ನೂ ಓದಿ: ಮಾಜಿ ಪ್ರಧಾನಿ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ!

ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯ ನೀಡಲು ಪೊಲೀಸ್‌ ಠಾಣೆಗೆ ಹೋಗಿ ತಾವಾಗಿಯೇ ಎಂಎಲ್‌ಸಿ ಸೂರಜ್‌ ರೇವಣ್ಣ ಸಿಕ್ಕಿಬಿದ್ದಿದ್ದರು. ಸಂತ್ರಸ್ತ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಶನಿವಾರ ರಾತ್ರಿ ಕೇಸ್ ದಾಖಲಾದ ಬೆನ್ನಲ್ಲೇ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ ಈ ಕೇಸ್‌ನ ತನಿಖೆ ಹೊಣೆಯನ್ನು ಬಿ.ಕೆ.ಸಿಂಗ್ ನೇತೃತ್ವದ ತಂಡಕ್ಕೆ ವಹಿಸಲಾಗದೆ.

 

ಸೂರಜ್ ರೇವಣ್ಣ ಬಂಧನದ ಬಳಿಕ ಬೆಂಗಳೂರಿಗೆ ಕರೆತಂದಿರುವ ಪೊಲೀಸರು ಮೊದಲಿಗೆ ನಗರದ ಬೌರಿಂಗ್​ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಿ ಬಳಿಕ ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆಯಲ್ಲಿದ್ದೂ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ವಶಕ್ಕೆ ಪೊಲೀಸರು ಮನವಿ ಮಾಡಲಿದ್ದಾರೆ.

RELATED ARTICLES

Related Articles

TRENDING ARTICLES