Sunday, June 30, 2024

ನಟ ದರ್ಶನ್ ಗೆ ಹಲವು ರೌಡಿಗಳ ಜೊತೆ ನಂಟು: ತುಮಕೂರು ಜೈಲಿಗೆ ಶಿಫ್ಟ್?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗ್ಯಾಂಗ್ ಜೈಲು ಸೇರಿದೆ. ಪೊಲೀಸ್ ಕಸ್ಟಡಿ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಗ್ಯಾಂಗ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟ ದರ್ಶನ್ ಸೇರಿದಂತೆ ಕೆಲ ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ಮನವಿ ಮಾಡಿದ್ದಾರೆ. ಈ ಕುರಿತು ಅರ್ಜಿ ಇಂದು 24 ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಒಂದೇ ಕಡೆ ಇರುವುದು ಸುರಕ್ಷಿತವಲ್ಲ. ಅದರಲ್ಲೂ ನಟ ದರ್ಶನ್‌ಗೆ ಕೆಲ ರೌಡಿಗಳ ಪರಿಚಯ ಇರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ದಿನವೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂರ್ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು.

ಇದನ್ನೂ ಓದಿ: Power TV Impact: ಸಲಿಂಗ ಪ್ರಕರಣ​​​; ಡಾ.ಸೂರಜ್‌ ರೇವಣ್ಣ ಅರೆಸ್ಟ್​​​​​

ನಟ ದರ್ಶನ್ ಬೇಲ್‌ಗೆ ಅರ್ಜಿ ಸಲ್ಲಿಕೆ:

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಬಂಧಿತರಾಗಿ ಜೈಲು ಸೇರಿರುವ ನಟ ದರ್ಶನ್, ಇಂದು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ. ನಟ ದರ್ಶನ್ ಪರ ವಕೀಲ ಸಿ.ವಿ.ನಾಗೇಶ್‌ ಅವರು ಬೇಲ್‌ಗೆ ಅರ್ಜಿ ಸಲ್ಲಿಸಲಿದ್ದಾರೆ. 24ನೇ ಎಸಿಎಂಎಂ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಲಿದ್ದಾರೆ. ವಕೀಲ ಸಿ.ವಿ.ನಾಗೇಶ್ ದರ್ಶನ್‌ ಪರ ವಾದ ಮಂಡಿಸಲಿದ್ದಾರೆ.

ರೇಣುಕಾಸ್ವಾಮಿ ಹೆಸರಲ್ಲಿ ಹೊಸ ಸಿಮ್​ ಖರೀದಿ:

ನಟ ದರ್ಶನ್ ಆ್ಯಂಡ್​ ಗ್ಯಾಂಗ್​ನಿಂದ ಕೊಲೆ ಪ್ರಕರಣಕ್ಕೆ ಸಂಬಂಧಿಸದಂತೆ ರೇಣುಕಾಸ್ವಾಮಿ ಹೆಸರಲ್ಲಿ ಪೊಲೀಸರು ಹೊಸ ಸಿಮ್​ ಕಾರ್ಡ್ ಅನ್ನು​ ಖರೀದಿ ಮಾಡಿದ್ದಾರೆ. ಕೋರ್ಟ್ ಅನುಮತಿ ಮೇರೆಗೆ ಪೊಲೀಸರು ಸಿಮ್ ಖರೀದಿಸಿ ಆಕ್ಟಿವ್ ಮಾಡಿದ್ದಾರೆ.

ಕೊಲೆ ಪ್ರಕರಣದಲ್ಲಿ ದರ್ಶನ್ ಸೇರಿ ಆರೋಪಿಗಳನ್ನು ಬಂಧಿಸಿದ ಬಳಿಕ ವಿಚಾರಣೆ ಮಾಡಲಾಗಿದೆ. ಹತ್ಯೆ ನಂತರ ಆರೋಪಿಗಳು ವೆಬ್ ಆ್ಯಪ್ ಬಳಸಿರೋದು ತನಿಖೆಯಿಂದ ಗೊತ್ತಾಗಿದೆ. ನಂತರ ಡಾಟಾವನ್ನ ನಿಷ್ಕ್ರಿಯಗೊಳಿಸಿದ್ದಾರೆ. ಇದರಿಂದ ಹಲವು ಮಾಹಿತಿ ಪೊಲೀಸರಿಗೆ ಸಿಕ್ಕಿಲ್ಲದ ಕಾರಣ ಅದನ್ನು ರಿ ಆಕ್ಸೆಸ್ ಮಾಡಲು ಇದೀಗ ಪೊಲೀಸರು ಮುಂದಾಗಿದ್ದಾರೆ.

RELATED ARTICLES

Related Articles

TRENDING ARTICLES