ಬೆಂಗಳೂರು: ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋವೊಂದು ಸೋಷಿಯಲ್ ಮೀಡಿಯಾದ ತುಂಬೆಲ್ಲಾ ವೈರಲ್ ಆಗಿದೆ. ಆಡಿಯೋದಲ್ಲಿ ಸಪ್ತಮಿ ಗೌಡ ಎನ್ನಲಾಗಿರುವ ಯುವತಿ ಅಳುತ್ತಾ ‘’ನನ್ನ ಸೈಡ್ ಆಫ್ ದಿ ಸ್ಟೋರಿ ಕೇಳಿ. ನನಗೊಂದು ಚಾನ್ಸ್ ಕೊಡಿ.. ನನ್ನಿಂದ ತಪ್ಪಾಗಿದೆ’’ ಅಂತ ಮನವಿ ಮಾಡಿದ್ದಾರೆ.
ಆಡಿಯೋದಲ್ಲಿ ಏನಿದೆ?:
‘ಸರ್ ನಿಮಗೆ ಈಗಾಗಲೇ ವಿಷಯ ಗೊತ್ತಿರುತ್ತೆ ಏನಾಗಿದೆ ಏನು ಅಂತ ನನ್ನ ಸೈಡ್ ಆಫ್ ದಿ ಸ್ಟೋರಿನೂ ಕೇಳಿ. ನನ್ನಿಂದ ತಪ್ಪಾಗಿಲ್ಲ ಎಂದು ನಾನು ಹೇಳಿಲ್ಲ. ಖಂಡಿತ ನನ್ನಿಂದ ತಪ್ಪಾಗಿದೆ. ನನ್ನ ಅಮ್ಮನ ಮೇಲೆ ಆಣೆ ಮಾಡಿ ಹೇಳ್ತೀನಿ ಸರ್ ನಾನು ಎಂದಿಗೂ ಸಹ ಗುರು (ಯುವ ಮೂಲ ಹೆಸರು) ಮದ್ದೆ ಬಿಟ್ಟು ಬಾ ಅಂತ ಯಾವತ್ತೂ ಹೇಳಿಲ್ಲ. ನೀವು ಬೇಕಿದ್ದರೆ ಅವನನ್ನು ಕೇಳಬಹುದು. ಯಾರನಾದರೂ ಕೇಳಬಹುದು. ಹೌದು ಇದು ನಿಮ್ಮ ಸೆಟ್ನಲ್ಲಿ ಆಯ್ತು ಅದಕ್ಕೆ ನಿಮಗೆ ನಮ್ಮ ಮೇಲೆ ಎಷ್ಟೇ ಕೋಪ ಇರಬಹುದು ಸರ್ ಪರವಾಗಿಲ್ಲ. ಆದರೆ ನನ್ನ ಸೈಡ್ ಆಫ್ ದಿ ಸ್ಟೋರಿಯನ್ನೂ ಕೇಳಿ” ಎಂದಿದ್ದಾರೆ.
ಇದನ್ನೂ ಓದಿ: ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ ಬಂದ ನಟ ವಿನೋದ್ ಪ್ರಭಾಕರ್!
‘ಗುರುದು ಫಸ್ಟ್ ಸಿನಿಮಾ. ನಿಮಗೂ ಸಹ ಬಹಳ ಮುಖ್ಯವಾದ ಸಿನಿಮಾ. ಎಲ್ಲರೂ ಕಷ್ಟ ಪಟ್ಟು ಮಾಡಿರುವ ಸಿನಿಮಾ. ನಾನು ಮಧ್ಯೆ ಬರಲ್ಲ ಸರ್. ನಾನು ಇದನ್ನು ಇನ್ನಷ್ಟು ಕಾಂಪ್ಲೆಕ್ಸ್ ಮಾಡುವುದಿಲ್ಲ. ಬೈಯ್ಯುವುದಾದರೆ ಬೈಯ್ದಿರಿ ಆದರೆ ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಇಷ್ಟು ಕೆಟ್ಟವಳ ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ. ಸರ್. ನನ್ನಿಂದ ಇನ್ನೊಬ್ಬರಿಗೆ ನೋವಾಗಿದೆ. ಆದರೆ ನಿಜವಾಗಿಯೂ ನಾನು ನಂಬಿ ಮಾಡಿದ್ದು ಸರ್ ಅದನ್ನ ಗುರು ಬಂದು ನನ್ನ ಹತ್ರ ಅಷ್ಟು ಹೇಳಿದ ಮೇಲೆಯೇ ನಾನು ಮುಂದುವರಿದೆ. ಇಲ್ಲಾಂದ್ರೆ ನಾನು… ಸಾರಿ ಸರ್, ಜಸ್ಟ್ ಚಾನ್ಸ್ ಕೇಳಿದ್ದೀನಿ ಅಷ್ಟೇ” ಎಂಬ ಮಾತುಗಳು ಆಡಿಯೊದಲ್ಲಿದೆ.