Sunday, September 29, 2024

ಹಾಲಿನ ದರ ಏರಿಕೆ: ಬೆಲೆ ಏರಿಕೆ ಮಾಡುವುದರಲ್ಲಿ ಕಾಂಗ್ರೆಸ್​ ಸರ್ಕಾರ ನಿಸ್ಸೀಮ- ಬಿವೈ ವಿಜಯೇಂದ್ರ ವ್ಯಂಗ್ಯ

ಬೆಂಗಳೂರು: ಪೆಟ್ರೋಲ್​ ಮತ್ತು ಡೀಸೆಲ್​ ನ ಬೆಲೆ ಏರಿಕೆ ಮಾಡಿದ ಬೆನ್ನಲ್ಲೇ ನಂದಿನಿ ಹಾಲಿನ ದರ ಲೀಟರ್​ಗೆ ಎರಡು ರೂಗಳನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಲೆ ಏರಿಸುವುದರಲ್ಲಿ ನಿಸ್ಸೀಮತನಕ್ಕೆ ಹೆಸರಾಗುತ್ತಿರುವ @INCKarnataka ಸರ್ಕಾರ ಜನ ಸಾಮಾನ್ಯ ಮನೆಯಲ್ಲಿ ಕ್ಷೀರ ಉಕ್ಕುವುದನ್ನು ಕ್ಷೀಣಿಸಲು ಹಾಲು ದರವನ್ನು ಉಕ್ಕಿಸಲು ಮುಂದಾಗಿದೆ. ಇತ್ತ ಬಡವರಿಗೂ ಉಪಕಾರಿಯಾಗಲ್ಲಿಲ್ಲ, ಹೈನುಗಾರಿಕೆ ಹಾಗೂ ಪಶುಸಂಗೋಪನೆ ಅವಲಂಬಿಸಿರುವ ರೈತರ ಬದುಕೂ ಹಸನಾಗಿಸಲಿಲ್ಲ, ಇದೀಗ ನಂದಿನಿ ಹಾಲಿನ ದರ ಹೆಚ್ಚಿಸಿ ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂ 10 ಪೈಸೆ ಹೆಚ್ಚಳ ಮಾಡಲಾಗಿದೆ.

ಇದನ್ನೂ ಓದಿ: ನಂದಿನಿ ಹಾಲಿನ ದರ ಲೀಟರ್​ಗೆ 2ರೂ ಹೆಚ್ಚಳ: ಗ್ರಾಹಕರ ಜೇಬಿಗೆ ಕತ್ತರಿ

ಈ ರಾಜ್ಯದ ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದು ಕೊಂಡಿದೆ. ಈ ಜನವಿರೋಧಿ ಸರ್ಕಾರ ಕೆಳಗಿಳಿಸುವವರೆಗೂ ಬಿಜೆಪಿಯ ಜನಪರ ಹೋರಾಟ ನಿರಂತರ ಸಾಗಲಿದೆ. ಎಂದು ಪ್ರತಿಕ್ರಿಯೆ ನೀಡಿ ಪೋಸ್ಟ್​ ಹಂಚಿಕೊಂಡಿದ್ದಾರೆ.

ಇನ್ನು ಹಾಲಿನ ದರ ಏರಿಕೆ ವಿಚಾರ ರಾಜ್ಯಾದ್ಯಂತ ಭಾರಿ ಸದ್ದು ಮಾಡುತ್ತಿದ್ದೂ ಜನರು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

RELATED ARTICLES

Related Articles

TRENDING ARTICLES