Sunday, September 29, 2024

ನಂದಿನಿ ಹಾಲಿನ ದರ ಲೀಟರ್​ಗೆ 2ರೂ ಹೆಚ್ಚಳ: ಗ್ರಾಹಕರ ಜೇಬಿಗೆ ಕತ್ತರಿ

ಬೆಂಗಳೂರು: ಪೆಟ್ರೋಲ್​ ಬೆಲೆ ಏರಿಕೆ ಬೆನ್ನಲ್ಲೇ ನಿತ್ಯ ಬಳಕೆಯ ಹಾಲಿನ ದರವನ್ನು ಲೀಟರ್​ಗೆ​ 2 ರೂಪಾಯಿ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳಿ ಕೆಎಂಎಫ್ (KMF) ಮಹತ್ವದ ನಿರ್ಧಾರ ಪ್ರಕಟಿಸಿದೆ.

ಈ ಕುರಿತು ಬೆಂಗಳೂರಿನ ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.

ಪ್ರತಿ ಲೀಟರ್ ನಂದಿನಿ ಹಾಲಿನ ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು.

ಇದನ್ನೂ ಓದಿ: ಉಮಾಪತಿ ಹಾಗು ಪ್ರಥಮ್​ಗೆ ಬೆದರಿಕೆ ಹಾಕಿದ್ದ ದರ್ಶನ್​ ಅಂದಾಭಿಮಾನಿ ಅರೆಸ್ಟ್​: ಕ್ಷಮೆ ಕೋರಿದ ವೀಡಿಯೋ ವೈರಲ್​

ಅರ್ಧ ಲೀಟರ್ ಹಾಲಿನ ಪ್ಯಾಕೆಟ್​ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್​​​​ನಲ್ಲಿ ಅಮುಲ್ ಒಂದು ಲೀಟರ್​ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾನಾಯ್ಕ್ ಹೇಳಿದರು.

ಕೆಎಂಎಫ್​ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

RELATED ARTICLES

Related Articles

TRENDING ARTICLES