Saturday, June 29, 2024

ತಿಹಾರ್​ ಜೈಲಿನಲ್ಲಿ ದೆಹಲಿ ಸಿಎಂ ಕೇಜ್ರಿವಾಲ್‌ ಬಂಧಿಸಿದ ಸಿಬಿಐ

ದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ದೆಹಲಿಯ ತಿಹಾರ್ ಜೈಲಿನಿಂದಲೇ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ರಾತ್ರಿ ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿಂದು ನಡೆಯಲಿದೆ. ಇದರ ನಡುವೆ ಸಿಬಿಐ ಕೇಜ್ರಿವಾಲ್ ಬಂಧಿಸಿದೆ.

ಇದನ್ನೂ ಓದಿ:  Y ಅಕ್ಷರದಿಂದ ಆರಂಭವಾಗುವ ನಟ-ನಟಿಯರಿಗೆ ಭಾರಿ ಗಂಡಾಂತರ: ಕಾಲಜ್ಞಾನ ಭವಿಷ್ಯ ನುಡಿದ ಸ್ವಾಮೀಜಿ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜಾಮೀನು ನೀಡುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ದೆಹಲಿ ಹೈಕೋರ್ಟ್ ಮಂಗಳವಾರ ತಡೆದಿತ್ತು. ವಿಚಾರಣಾ ನ್ಯಾಯಾಲಯದ ಆದೇಶವು “ವಿಕೃತತೆಯನ್ನು ಪ್ರತಿಬಿಂಬಿಸುತ್ತದೆ” ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.

ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ (ಜಾರಿ ನಿರ್ದೇಶನಾಲಯ) ಬಂಧಿಸಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2ರಂದು ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು.

RELATED ARTICLES

Related Articles

TRENDING ARTICLES