Sunday, September 29, 2024

ಹಾಲಿನ ದರ ಏರಿಕೆಯಾಗಿಲ್ಲ, ಕಾಫಿ ಟೀ ದರಗಳ ಹೆಚ್ಚಳ ಸಲ್ಲದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಾಲಿನ ದರ ಏರಿಕೆಯಾಗಿಲ್ಲ ಮತ್ತು ಹೋಟೆಲ್​ಗಳಲ್ಲಿ ಕಾಫಿ,ಟೀ ದರಗಳ ಹೆಚ್ಚಳ ಸಲ್ಲದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದ ವಿಧಾನಸೌಧದಲ್ಲಿ ಮಾದ್ಯಮದವರನ್ನುದ್ದೇಶಿಸಿ ಮಾತನಾಡಿದ ಅವರು, ಹಾಲಿನ ದರ ಹೆಚ್ಚಾಗಿಲ್ಲ. ಕಳೆದ ವರ್ಷ ಇದೇ ವೇಳೆಗೆ ಹಾಲಿನ ಉತ್ಪಾದನೆ 90 ಲಕ್ಷ ಲೀಟರ್ ಇತ್ತು. ಈಗ 99 ಲಕ್ಷಕ್ಕಿಂತ ಹೆಚ್ಚಾಗಿದೆ. ರೈತರಿಂದ ನಾವು ಹಾಲು ಪಡೆಯಬೇಕಾಗಿದ್ದು, ಅದನ್ನು ಮಾರಾಟ ಮಾಡಬೇಕಿದೆ ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ವಿಪಕ್ಷ ನಾಯಕ: ಬಿಜೆಪಿ, ನರೇಂದ್ರ ಮೋದಿಯನ್ನು ಎದುರಿಸಲು ರಾಹುಲ್ ಸೂಕ್ತ ವ್ಯಕ್ತಿ

ಅರ್ಧ ಲೀಟರ್ ಪ್ಯಾಕೆಟ್ ನಲ್ಲಿ 50 ಮೀ.ಲೀ ಹೆಚ್ಚು ಮಾಡಿದ್ದು, ಅದಕ್ಕೆ ತಗುಲುವ 2.10 ರೂ.ಗಳನ್ನು ಪ್ರಮಾಣಕ್ಕೆ ತಕ್ಕಂತೆ ಬೆಲೆ ನಿಗದಿ ಮಾಡಲಾಗಿದೆ ಎಂದು ಪುನರುಚ್ಚರಿಸಿದರು. ಮಾರುಕಟ್ಟೆ ಅಗತ್ಯವಿದೆ. ಹಾಲಿನ ಬೆಲೆ ಹೆಚ್ಚು ಮಾಡಿಲ್ಲ. ಹಾಲು ಹೆಚ್ಚು ಉತ್ಪಾದನೆಯಾಗಿರುವುದನ್ನು ಹೆಚ್ಚು ನೀಡಿ ಅದಕ್ಕೆ ತಕ್ಕದರವನ್ನಷ್ಟೇ ನಿಗದಿ ಮಾಡಲಾಗಿದೆ ಎಂದರು.

ಕಾಫಿ ಟೀ ದರಗಳ ಹೆಚ್ಚಳ ಸಲ್ಲದು:

ಹೊಟೇಲ್ ಮಾಲೀಕರ ಸಂಘದವರು ಸಭೆ ಸೇರಿ ಕಾಫಿ ಟೀ ದರಗಳನ್ನು ಹೆಚ್ಚಿಸಲಾಗುವುದು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಹೇಗೆ ಹೆಚ್ಚಿಸುತ್ತಾರೆ ಹಾಲಿನ ಬೆಲೆ ಏರಿದ್ದರೆ ಮಾತ್ರ ಹೆಚ್ಚಿಸಬೇಕು ಎಂದರು.

ರೈತರಿಂದ ಹಾಲು ಕೊಳ್ಳಬೇಕು:
ಹೆಚ್ಚಾಗಿ ಉತ್ಪಾದನೆಯಾಗಿರುವ ಹಾಲನ್ನು ರೈತರಿಂದ ಕೊಳ್ಳಬೇಕೆ ಹೊರತು ಚೆಲ್ಲಲಾಗುವುದಿಲ್ಲ. ಕೊಳ್ಳುವವವರಿಗೆ ಹಾಲು ಹೆಚ್ಚಾಗಿ ದೊರೆಯುತ್ತಿದ್ದು ಜನ ಹಾಲನ್ನು ಕೊಳ್ಳಬೇಕು ಎಂದರು.

RELATED ARTICLES

Related Articles

TRENDING ARTICLES