Monday, July 1, 2024

ಅಡ್ವಾಣಿ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

ದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್​.ಕೆ. ಅಡ್ವಾಣಿ ಅವರನ್ನು ತಡರಾತ್ರಿ ದೆಹಲಿಯ ಏಮ್ಸ್‌ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆಂದು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್​.ಕೆ ಅಡ್ವಾಣಿಯವರಿಗೆ 96 ವರ್ಷವಾಗಿದ್ದು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅವರನ್ನು ಪರೀಕ್ಷಿಸಿದ ವೈದ್ಯರು ಯಾವುದೇ ಗಾಬರಿ ಪಡುವಂತಹದ್ದು ಏನೂ ಇಲ್ಲ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಸ್ಪಷ್ಟನೆ ನೀಡಿದ HDK!

ಅಯೋಧ್ಯೆ ರಾಮಮಂದಿರ ಹೋರಾಟದ ಮೂಲಕ ಹಿಂದುತ್ತದ ಬದ್ದ ಪ್ರತಿಪಾದಕ, ‘ಲೋಹ ಪುರುಷ’ ಎಂದೇ ಗುರುತಿಸಿಕೊಂಡಿದ್ದ ಅಡ್ವಾಣಿ 1927ರ ನವೆಂಬರ್ 8ರಂದು ಅವಿಭಜಿತ ಭಾರತದ ಕರಾಚಿಯಲ್ಲಿ (ಈಗಿನ ಪಾಕಿಸ್ತಾನ) ಜನಿಸಿದ್ದರು.

ಕರಾಚಿಯ ಸೇಂಟ್ ಪ್ಯಾಟ್ರಿಕ್ ಪ್ರೌಢಶಾಲೆಯಲ್ಲಿ ಪ್ರಾಥಮಿಕ, ಪ್ರೌಢ ಶಿಕ್ಷಣ, ಮುಂದೆ ಸಿಂಥ್ ಪ್ರಾಂತ್ಯದ ಹೈದರಾಬಾದ್‌ನ ಡಿ.ಜಿ.ನ್ಯಾಷನಲ್ ಕಾಲೇಜಿನಲ್ಲಿ ಪದವಿ, ಬಳಿಕ ಬಾಂಬೆಯ ಸರ್ಕಾರಿ ಕಾಲೇಜಿನಲ್ಲಿ ಕಾನೂನು ಶಿಕ್ಷಣ ಪಡೆದರು. 1947ರಲ್ಲಿ ಆರ್‌ಎಸ್‌ಎಸ್ ಸೇರಿದ ಅವರು, ರಾಜಸ್ಥಾನದಲ್ಲಿ ಸಂಘದ ಉಸ್ತುವಾರಿ ವಹಿಸಿಕೊಂಡಿದ್ದರು.

RELATED ARTICLES

Related Articles

TRENDING ARTICLES