Sunday, June 30, 2024

ಪಾನಿಪೂರಿಯಲ್ಲಿ ಕ್ಯಾನ್ಸರ್​ಕಾರಕ ಅಂಶ ಪತ್ತೆ: ಬ್ಯಾನ್​ಗೆ ಚಿಂತನೆ

ಬೆಂಗಳೂರು: ರಾಜ್ಯಾದ್ಯಂತ ಗೋಬಿ ಬ್ಯಾನ್​ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಗೋಬಿ ಮಂಚೂರಿ, ಕಬಾಬ್​​ಗೆ ಕ್ಯಾನ್ಸರ್​ ಕಾರಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವುಗಳಿಗೆ ಬಳಸುವ ಕೃತಕ ಬಣ್ಣವನ್ನು ಬ್ಯಾನ್​​ ಮಾಡಿದೆ. ಇದೀಗ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಪಾನಿಪುರಿ ಪ್ರಿಯರಿಗೂ ಶಾಕ್​​ ನೀಡಲು ಸದ್ದಿಲ್ಲದೆ ತಯಾರಿ ನಡೆಸಿದೆ.

ಇದನ್ನೂ ಓದಿ: ಡಿಕೆಶಿ ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ಸಿದ್ದರಾಮಯ್ಯ ಸಮ್ಮುಖದಲ್ಲೇ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಸ್ವಾಮೀಜಿ ಮನವಿ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬೆಂಗಳೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿನ ಪಾನಿಪುರಿ ಮಾದರಿಗಳನ್ನ ಸಂಗ್ರಹಿಸಿ ಪರಿಶೀಲನೆ ನಡೆಸಿದೆ. ಪರಿಶೀಲನೆ ವೇಳೆ ಪಾನಿಪೂರಿ ತಯಾರಿಕೆಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಇರುವುದು ಪತ್ತೆಯಾಗಿದೆ. ಹೀಗಾಗಿ ಶೀಘ್ರದಲ್ಲೆ ಪಾನಿಪೂರಿಗೆ ಬಳಸುವ ಕ್ಯಾನ್ಸರ್ ಕಾರಕ ಅಂಶಗಳು ಬ್ಯಾನ್ ಮಾಡಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಧರಿಸಿದೆ.

ಬೆಂಗಳೂರಿನ 49 ಕಡೆಗಳಲ್ಲಿ ಪಾನಿಪುರಿ ತಯಾರಿಕೆಗೆ ಕ್ಯಾನ್ಸರ್ ಕಾರಕ ಇರುವ ಸಾಸ್ ಮತ್ತು ಮೀಟಾ ಖಾರದ ಪುಡಿ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ಅಂಶಗಳು ಮನುಷ್ಯನ ದೇಹ ಸೇರಿದರೆ ಆರೋಗ್ಯ ಕ್ಷೀಣಿಸುತ್ತಾ ಹೋಗಲಿದೆ. ಹೀಗಾಗಿ ಕ್ಯಾನ್ಸರ್ ಕಾರಕ ಇರುವ ಸಾಸ್, ಮೀಟಾ ಖಾರದ ಪುಡಿ ಬ್ಯಾನ್​ ಮಾಡುವ ಬಗ್ಗೆ ಚಿಂತನೆ ನಡೆದಿದೆ.

RELATED ARTICLES

Related Articles

TRENDING ARTICLES