Sunday, June 30, 2024

ಪೋಕ್ಸೋ ಪ್ರಕರಣ: ಬಿಎಸ್​​ವೈ ವಿರುದ್ದ 750 ಪುಟಗಳ ದೋಷಾರೋಪ ಪಟ್ಟಿ

ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ  ಪ್ರಕರಣ ಸಂಬಂಧ ಸಿಐಡಿ (CID) ಅಧಿಕಾರಿಗಳು ಕೋರ್ಟ್‍ಗೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಸಿಐಡಿ ಅಧಿಕಾರಿಗಳು ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ಯಡಿಯೂರಪ್ಪ ಸೇರಿದಂತೆ 4 ಜನರ ವಿರುದ್ಧ  ಸಲ್ಲಿಸಲಾಗಿದೆ. 73 ಸಾಕ್ಷಿಗಳ ಪರಿಗಣಿಸಿ ದೋಷಾರೋಪ ಪಟ್ಟಿ ತಯಾರಿಸಲಾಗಿದೆ. ಯಡಿಯೂರಪ್ಪ, ಅರುಣ್, ರುದ್ರೇಶ್ ಮತ್ತು ಮರಿಸ್ವಾಮಿ ಎಂಬವರ ವಿರುದ್ಧ ಸಿಐಡಿ ಅಧಿಕಾರಿಗಳು 1ನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಿಡಿದ್ದಾರೆ ಎಂಬ ಆರೋಪದ ಮೇಲೆ ಸದಾಶಿವನಗರ ಠಾಣೆಯಲ್ಲಿ ಬಿಎಸ್‍ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ನೀಡಿತ್ತು. ತನಿಖೆಗೆ ಹಾಜರಾಗುವಂತೆ ಬಿಎಸ್‍ವೈಗೆ ನೋಟಿಸ್ ಕೊಟ್ಟದ್ದರಿಂದ ಅವರು ಕಾಲಾವಕಾಶ ಕೇಳಿದ್ದರು. ಬಳಿಕ ತನಿಖೆಗೆ ಹಾಜರಾಗಿಲ್ಲ ಎಂದು ಸಿಐಡಿ ಅಧಿಕಾರಿಗಳು, ಅವರ ಬಂಧನಕ್ಕೆ ಅರೆಸ್ಟ್ ವಾರೆಂಟ್ ಪಡೆದಿದ್ದರು. ಬಳಿಕ ಬಿಎಸ್‍ವೈ ಮಧ್ಯಂತರ ಜಾಮೀನು ಪಡೆದಿದ್ದರು.

RELATED ARTICLES

Related Articles

TRENDING ARTICLES