Sunday, June 30, 2024

ಡಿಕೆಶಿ ಗೆ ಸಿಎಂ ಸ್ಥಾನ ಬಿಟ್ಟುಕೊಡಿ: ಸಿದ್ದರಾಮಯ್ಯ ಸಮ್ಮುಖದಲ್ಲೇ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಸ್ವಾಮೀಜಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಪೋಸ್ಟ್​ ಸೃಷ್ಟಿಸುವ ಬಗ್ಗೆ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಸಿಎಂ ಉಪಸ್ಥಿತರಿದ್ದ ವೇದಿಕೆಯಲ್ಲಿ ಡಿ.ಕೆ ಶಿವಕುಮಾರ್​ರನ್ನು ಮುಖ್ಯಮಂತ್ರಿ ಮಾಡುವಂತೆ ಸ್ವಾಮೀಜಿಯೊಬ್ಬರು ಮನವಿ ಮಾಡಿಕೊಂಡಿರುವ ಘಟನೆ ನಡೆದಿದ್ದು, ಇದರಿಂದ ಸಿದ್ದರಾಮಯ್ಯ ಅವರಿಗೆ ತೀವ್ರ ಮುಜುಗರವಾಗಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 515ನೇ ಕೆಂಪೇಗೌಡ ಜಯಂತೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಉಪಸ್ಥಿರುವಾಗಲೇ ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರ್ ಸ್ವಾಮೀಜಿ ಯವರು ಮಾತನಾಡಿ ಕೆಪಿಸಿಸಿ ಅಧ್ಯಕ್ಷ ಹಾಗು ಡಿಸಿಎಂ ಡಿ.ಕೆ ಶಿವಕುಮಾರ್​ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸತ್ಯವಾಯ್ತು ಕಾಲಜ್ಞಾನ ಭವಿಷ್ಯ: YES Bank ನ 500 ಉದ್ಯೋಗಿಗಳು ವಜಾ

ರಾಜ್ಯದಲ್ಲಿ ಹಲವು ಜನ ಸಿಎಂ ಗಳಾಗಿ ಸ್ಥಾನವನ್ನು ಅನುಭವಿಸಿದ್ದಾರೆ, ಡಿ.ಕೆ.ಶಿವಕುಮಾರ್ ಒಬ್ಬರು ಮಾತ್ರ ಮುಖ್ಯಮಂತ್ರಿ ಆಗಿಲ್ಲ, ಸಿದ್ದರಾಮಯ್ಯನವರು ದಯವಿಟ್ಟು ಡಿಕೆಶಿಗೆ ಅಧಿಕಾರ ಬಿಟ್ಟು ಕೊಡ್ಬೇಕು, ಸಿದ್ದರಾಮಯ್ಯ ನವರು ಮನಸ್ಸು ಮಾಡಿದ್ರೆ ಮಾತ್ರವೇ ಇದು ಆಗುತ್ತೆ, ಸಿದ್ದರಾಮಯ್ಯರಿಗೆ ನಾನು ಮತ್ತೊಮ್ಮೆ ನಮಸ್ಕಾರ ಮಾಡ್ತೀನಿ, ನಿಮಗೆ ಅನುಭವ ಇದೆ, ಈಗ ಅವರಿಗೆ ಅವಕಾಶ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಈ ವೇಳೆ ವೇದಿಕೆಯಲ್ಲಿದ್ದ ಸಿಎಂ ಸಿದ್ದರಾಮಯ್ಯ ಮೌನಕ್ಕೆ ಶರಣಾಗಿದ್ದರು ಎನ್ನಲಾಗಿದೆ.

RELATED ARTICLES

Related Articles

TRENDING ARTICLES